ಕಾವೇರಿ ಗಲಭೆ: ಸಾಕ್ಷ್ಯಾಧಾರ ಕೊರತೆಯಿಂದ ಪ್ರತಿಭಟನಾಕಾರರಿಗೆ ಜಾಮೀನು ಸಿಗುವ ಸಾಧ್ಯತೆ

ತಮಿಳು ನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಸಂಬಂಧವಾಗಿ ಸೆಪ್ಟೆಂಬರ್ 12ರಂದು ಕರ್ನಾಟಕ ಬಂದ್ ವೇಳೆ ಬೆಂಗಳೂರು ನಗರದಲ್ಲಿ...
ಕಾವೇರಿ ಗಲಭೆ ಸಂದರ್ಭದಲ್ಲಿ ಬೆಂಗಳೂರಿನ ರಸ್ತೆಯೊಂದರ ದೃಶ್ಯ
ಕಾವೇರಿ ಗಲಭೆ ಸಂದರ್ಭದಲ್ಲಿ ಬೆಂಗಳೂರಿನ ರಸ್ತೆಯೊಂದರ ದೃಶ್ಯ
ಬೆಂಗಳೂರು: ತಮಿಳು ನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಸಂಬಂಧವಾಗಿ ಸೆಪ್ಟೆಂಬರ್ 12ರಂದು ಕರ್ನಾಟಕ ಬಂದ್ ವೇಳೆ ಬೆಂಗಳೂರು ನಗರದಲ್ಲಿ ನಡೆದ ಹಿಂಸಾಚಾರ ಸಂದರ್ಭದಲ್ಲಿ ಪೊಲೀಸರು 219 ಕೇಸುಗಳಿಗೆ ಸಂಬಂಧಪಟ್ಟಂತೆ ಸಾವಿರದ 277 ಮಂದಿಯನ್ನು ಬಂಧಿಸಿದ್ದರು.
ಇವರ ವಿರುದ್ಧ ಕೇಸು ದಾಖಲಿಸಲು ಪೊಲೀಸರು ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದ್ದರೂ ಕೂಡ ಬಂಧಿತರಾದವರು ಬಿಡುಗಡೆ ಹೊಂದುವ ಸಾಧ್ಯತೆಗಳೇ ಹೆಚ್ಚು ಎನ್ನುತ್ತಾರೆ.
''ನಾವು ಬಂಧಿತರ ವಿರುದ್ಧ ಹಲವು ಐಪಿಸಿ ಸೆಕ್ಷನ್ ನಡಿ ಕೇಸು ದಾಖಲಿಸಿದ್ದರೂ ಕೂಡ ಆರೋಪಪಟ್ಟಿ ಸಲ್ಲಿಸುವ ವೇಳೆ ಸರಿಯಾದ ಸಾಕ್ಷ್ಯಾಧಾರಗಳನ್ನು ಒದಗಿಸದಿದ್ದರೆ ಕೆಲವು ಸೆಕ್ಷನ್ ಗಳನ್ನು ಬಿಟ್ಟುಬಿಡಲಾಗುತ್ತದೆ ಎನ್ನುತ್ತವೆ ಪೊಲೀಸ್ ಮೂಲಗಳು.
ಹಿರಿಯ ವಕೀಲ ಎಂ.ಟಿ.ನಾಣಯ್ಯ, '' ಇದು ಸಮಯದ ವಿಷಯ,ಅಷ್ಟೊಂದು ಗಂಭೀರವಲ್ಲದ ಅಪರಾಧಗಳಲ್ಲಿ ಬಂಧಿತರಾದವರ ವಿರುದ್ಧ ಚಾರ್ಚ್ ಶೀಟ್ ಸಲ್ಲಿಕೆಯಾದರೂ ಕೂಡ ರಾಜ್ಯ ಸರ್ಕಾರ ಕೇಸನ್ನು ವಾಪಾಸ್ ತೆಗೆದುಕೊಂಡ ಉದಾಹರಣೆಗಳಿವೆ. ರಾಜ್ಯದ ಜನತೆಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಭಟನೆ ಮಾಡಲಾಗಿತ್ತು. ಹೀಗಾಗಿ ಅಧಿಕಾರಿಗಳು ಕೇಸನ್ನು ವಾಪಸ್ಸು ತೆಗೆದುಕೊಳ್ಳುವ ಸಾಧ್ಯತೆಗಳಿವೆ'' ಎನ್ನುತ್ತಾರೆ.
''ಚಾರ್ಚ್ ಶೀಟ್ ಸಲ್ಲಿಸಿದ ನಂತರ ಕೇಸನ್ನು ಹಿಂತೆಗೆದುಕೊಳ್ಳುವ ಹಕ್ಕು ರಾಜ್ಯ ಸರ್ಕಾರಕ್ಕಿದೆ. ಆದರೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯನ್ನುಂಟುಮಾಡಿದರೆ ಪೊಲೀಸರು ಬಲವಾದ ಸಾಕ್ಷ್ಯಾಧಾರಗಳನ್ನು ಒದಗಿಸಿದರೆ ಅಪರಾಧಿಗಳೆಂದು ಸಾಬೀತಾಗುವ ಸಾಧ್ಯತೆಗಳು ಹೆಚ್ಚು ಎನ್ನುತ್ತಾರೆ.
 ''ನಾವು ಸರಿಯಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವಲ್ಲಿ ಗಮನ ಕೇಂದ್ರೀಕರಿಸಿದ್ದೇವೆ.ಬಂಧಿತರಾದವರು ಎಲ್ಲರೂ ಐಪಿಸಿ ಸೆಕ್ಷನ್ ನಡಿಯಲ್ಲಿ ದಾಖಲಾಗಿಲ್ಲ. ನಾವು ಜನರು, ಸುದ್ದಿ ವಾಹಿನಿಗಳಿಂದ, ಸಿಸಿಟಿವಿ ಮತ್ತು ಇತರ ಮೂಲಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ ಕಷ್ಟದ ವಿಷಯವೆಂದರೆ ಸಾಕ್ಷಿದಾರರು ನ್ಯಾಯಾಲಯದಲ್ಲಿ ವ್ಯತಿರಿಕ್ತ ಹೇಳಿಕೆ ನೀಡುತ್ತಾರೆ'' ಎನ್ನುತ್ತಾರೆ.
ಕಳೆದ ಗುರುವಾರ ನಗರ ನ್ಯಾಯಾಲಯ, ಐಪಿಸಿ ಸೆಕ್ಷನ್ 307ರಡಿ ದಾಖಲಾದ ಕೆಲವು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಸರಿಯಾದ ಸಾಕ್ಷ್ಯಾಧಾರಗಳನ್ನು ಸಲ್ಲಿಸಲು ವಿಫಲರಾಗಿದ್ದರಿಂದ ಕೆಲವರಿಗೆ ಜಾಮೀನು ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com