ವಿಶ್ವ ವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ: 5ನೇ ಬಾರಿ ಅಂಬಾರಿ ಹೊರಲಿದ್ದಾನೆ ಅರ್ಜುನ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಮೆರವಣಿಗೆಯ ಸೊಬಗನ್ನು ಸವಿಯಲು ಪ್ರವಾಸಿಗರು ಹಾಗೂ ...
ಚಿನ್ನದ ಅಂಬಾರಿ ಹೊರಲಿರುವ ಅರ್ಜುನ
ಚಿನ್ನದ ಅಂಬಾರಿ ಹೊರಲಿರುವ ಅರ್ಜುನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಮೆರವಣಿಗೆಯ ಸೊಬಗನ್ನು ಸವಿಯಲು ಪ್ರವಾಸಿಗರು ಹಾಗೂ ಸಾರ್ವಜನಿಕರು ಅರಮನೆಯತ್ತ ಆಗಮಿಸುತ್ತಿದ್ದಾರೆ.

ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಹಾಕಿರುವ ಶಾಮಿಯಾನಕ್ಕೆ ಬೆಳಗ್ಗೆಯಿಂದಲೇ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ನವ ವಧುವನಿಂತೆ ಸಿಂಗಾರಗೊಂಡಿರುವ ಸಾಂಸ್ಕೃತಿಕ ನಗರಿ ಮೈಸೂರು ಎಲ್ಲರ ಕಣ್ಮನ ಸೆಳೆಯುತ್ತಿದೆ.

ಕಳೆದ ನಾಲ್ಕು ವರ್ಷಗಳಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊತ್ತು ಯಶ್ವಸಿ ನಾಯಕನಾಗಿರುವ ಗಜಪಡೆ ಕ್ಯಾಪ್ಟನ್ ಅರ್ಜುನ ಇಂದು 5 ನೇ ಬಾರಿಗೆ ಅಂಬಾರಿ ಹೊತ್ತು ರಾಜ ಗಾಂಭೀರ್ಯದಿಂದ ನಡೆಯಲಿದ್ದಾನೆ. ದಸರಾ ಆರಂಭದಿಂದ 9 ದಿನಗಳು ನಡೆದ ತಾಲೀಮಿನಲ್ಲಿ ಅರ್ಜುನ ಯಶಸ್ವಿಯಾಗಿದ್ದಾನೆ. ಇಂದು ನಡೆಯುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಜನಸಾಗರವೇ ಹರಿದು ಬಂದಿರುತ್ತದೆ.

ಇದುವರೆಗೂ ಅರ್ಜುನನ್ನು ಮಾವುತ ದೊಡ್ಡ ಮಾಸ್ತಿ ನೋಡಿಕೊಳ್ಳುತ್ತಿದ್ದರು, ಆದರೆ ದೊಡ್ಡ ಮಾಸ್ತಿ ಸಾವನ್ನಪ್ಪಿದ ಕಾರಣ ಅವರ ಮಗ ಮಹೇಶ್ ನೋಡಿಕೊಳ್ಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊರಲಿರುವ ಅರ್ಜುನನ್ನು ಮುನ್ನಡೆಸಲು ಮಹೇಶ್ ಮುನ್ನಡೆಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com