ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಸ್ಕರ್ಟ್ ಬದಲು 'ಚೂಡಿದಾರ್ ಭಾಗ್ಯ'

ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಸ್ಕರ್ಟ್‌, ಶರ್ಟ್‌ ಬದಲಿಗೆ ಚೂಡಿದಾರ್‌ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಸ್ಕರ್ಟ್‌, ಶರ್ಟ್‌ ಬದಲಿಗೆ  ಚೂಡಿದಾರ್‌ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ತನ್ವೀರ್‌ ಸೇಠ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಸುರಕ್ಷತೆಯ ದೃಷ್ಟಿಯಿಂದ 8, 9, ಮತ್ತು 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಸಮವಸ್ತ್ರದಲ್ಲಿ ಚೂಡಿದಾರ್‌ ವಿತರಿಸಲು ನಿರ್ಧರಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ ಎಂದು ಅವರು ಹೇಳಿದರು.

ಸದ್ಯ ಸ್ಕರ್ಟ್‌ ಮತ್ತು ಶರ್ಟ್‌ ನೀಡಲಾಗುತ್ತಿದೆ. ಸೈಕಲ್‌ ತುಳಿದುಕೊಂಡು ಶಾಲೆಗೆ ಹೋಗುವ ವಿದ್ಯಾರ್ಥಿನಿಯರಿಗೆ ಇದರಿಂದ ತೊಂದರೆ ಆಗುತ್ತಿದೆ. ಅವರ ಸುರಕ್ಷತೆ ದೃಷ್ಟಿಯಿಂದ ಚೂಡಿದಾರ್‌ ನೀಡಲಾಗುವುದು. ಸುಮಾರು 6 ಲಕ್ಷ ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ದೊರೆಯಲಿದೆ ಎಂದು  ವಿವರಿಸಿದರು.

ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು 14,584 ಶಿಕ್ಷಕರ ಹುದ್ದೆಗಳು ಖಾಲಿ ಇವೆ. 2016–17ನೇ ಸಾಲಿಗೆ 10 ಸಾವಿರ ಮತ್ತು 2017–18 ಹಾಗೂ 2018–19ನೇ ಸಾಲಿನಲ್ಲಿ ತಲಾ 4 ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ ಎಂದು ಸಚಿವರು ಹೇಳಿದರು. ಅಲ್ಲದೆ, ಪ್ರಾಥಮಿಕ ಶಾಲೆಗಳಿಗೆ ಪ್ರಸಕ್ತ ವರ್ಷ 10 ಸಾವಿರ ಶಿಕ್ಷಕರನ್ನು ನೇಮಿಸಲು ನಿರ್ಧರಿಸಿದೆ ಎಂದು ಅವರು ವಿವಿರಿಸಿದರು.

ಸಿಎಂ ಅಸಮಾಧಾನ: ಇಲಾಖೆಯ ಎಲ್ಲ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಲವು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬ ಆಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಸೇಠ್‌ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com