ಬೆಂಗಳೂರು: ಮಾದಕ ವಸ್ತು ಕೊಕೈನ್ ಮಾರಾಟ ಮಾಡುತ್ತಿದ್ದ ನೈಜೀರಿಯಾದ ಇಬ್ಬರು ಆರೋಪಿಗಳನ್ನು ಶನಿವಾರ ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ 2.5 ಲಕ್ಷ ರುಪಾಯಿ ಮೌಲ್ಯದ 50 ಗ್ರಾಂ ಕೊಕೈನ್ ಅನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ದುಬಾ ಜೋಸೆಫ್ (25) ಹಾಗೂ ಸ್ಯಾಂಡಿ ರೋಸ್ (32) ಎಂದು ಗುರುತಿಸಲಾಗಿದ್ದು, ಅವರಿಂದ ಒಂದು ದ್ವಿಚಕ್ರ ವಾಹನ ಹಾಗೂ ಪಾಸ್ ಪೊರ್ಟ್ ಅನ್ನು ಸಹ ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದಿರಾನಗರದ 1ನೇ ಹಂತದಲ್ಲಿ ಕೊಕೈನ್ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಶರತ್ ಚಂದ್ರ ಅವರು ತಿಳಿಸಿದ್ದಾರೆ.