ಕೆ.ಆರ್ .ಮಾರುಕಟ್ಟೆಯಲ್ಲಿ ಕಸ ಗುಡಿಸಿದ ಮೇಯರ್ ಪದ್ಮಾವತಿ

ಕೃಷ್ಣರಾಜ ಮಾರುಕಟ್ಟೆಯಲ್ಲಿ ಮೇಯರ್ ಜಿ.ಪದ್ಮಾವತಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ...
ಕಸ ಗುಡಿಸುತ್ತಿರುವ ಮೇಯರ್ ಪದ್ಮಾವತಿ
ಕಸ ಗುಡಿಸುತ್ತಿರುವ ಮೇಯರ್ ಪದ್ಮಾವತಿ

ಬೆಂಗಳೂರು: ಕೃಷ್ಣರಾಜ ಮಾರುಕಟ್ಟೆಯಲ್ಲಿ  ಮೇಯರ್ ಜಿ.ಪದ್ಮಾವತಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.

ದಸರಾ ಹಬ್ಬ ಪ್ರಯುಕ್ತ ಕೆ.ಆರ್‌. ಮಾರುಕಟ್ಟೆಯಲ್ಲಿ ಕಸದ ರಾಶಿ ಹಾಕಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿತ್ತು. ಹೀಗಾಗಿ ಕೆ.ಆರ್‌. ಮಾರುಕಟ್ಟೆಗೆ ಶುಕ್ರವಾರ ಬೆಳಿಗ್ಗೆ ದಿಢೀರ್‌ ಭೇಟಿ ನೀಡಿದ್ದ ಪದ್ಮಾವತಿ, ಕಸದ ಸಮರ್ಪಕ ವಿಲೇವಾರಿ ಮಾಡದ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡಿದ್ದರು. ನಿರ್ಲಕ್ಷ್ಯ ಆರೋಪದ ಮೇಲೆ ಸಹಾಯಕ ಎಂಜಿನಿಯರ್‌ ಬಸವರಾಜ್‌ ಅವರಿಗೆ ಶೋಕಾಸ್‌ ನೋಟಿಸ್‌ ನೀಡಲು ಆದೇಶಿಸಿದ್ದರು.

ಇನ್ನು ಮುಂದೆ ಪ್ರತಿ ಶನಿವಾರ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮದಡಿ ಕೆ.ಆರ್. ಮಾರುಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಅವರು ಈ ವೇಳೆ ಘೋಷಿಸಿದ್ದರು. ಅದರಂತೆ ಶನಿವಾರ ಬೆಳಿಗ್ಗೆ ಉಪ ಮೇಯರ್ ಎಂ.ಆನಂದ್, ಆಡಳಿತ ಪಕ್ಷದ ನಾಯಕ ಆರ್.ಎಸ್. ಸತ್ಯನಾರಾಯಣ, ಆರೋಗ್ಯ ವಿಭಾಗದ ಅಧಿಕಾರಿಗಳು ಹಾಗೂ 200ಕ್ಕೂ ಹೆಚ್ಚು ಪೌರ ಕಾರ್ಮಿಕರು ಪೊರಕೆ ಹಿಡಿದು ಕಸ ಗುಡಿಸಿದರು.

ಬಳಿಕ ಮಾತನಾಡಿದ ಪದ್ಮಾವತಿ, ಕೆ.ಆರ್‌. ಮಾರುಕಟ್ಟೆಯ ನಿಗದಿತ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ಮಾಡಬೇಕು. ಈ ಸ್ಥಳಗಳನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ತಪ್ಪಿದ್ದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com