ಇಂಡಿಕಾ ಕಾರು-ಲಾರಿ ನಡುವೆ ಭೀಕರ ಡಿಕ್ಕಿ: ಮಗು ಸೇರಿ 4 ಸಾವು

ಇಂಡಿಕಾ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ...
ಅಪಘಾತ
ಅಪಘಾತ
ಬೆಳಗಾವಿ: ಇಂಡಿಕಾ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
ಬಾಗಲಕೋಟೆಯಿಂದ ಬೆಳಗಾವಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲಾ ಬೆಳಗಾವಿ ಜಿಲ್ಲೆಯ ಕಾಕಲಾತಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. 
ಮಾರಿಹಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com