ಮಲ್ಲೇಶ್ವರಂ ಸ್ಫೋಟ ಪ್ರಕರಣ: ಸಂತ್ರಸ್ತೆ ಲಿಷಾ ಗೆ ಸರ್ಕಾರಿ ನೌಕರಿ ನೀಡಲು 'ಹೈ' ಆದೇಶ

2013ರ ಏಪ್ರಿಲ್‌ 17ರಂದು ಮಲ್ಲೇಶ್ವರದ ಬಿಜೆಪಿ ಕಚೇರಿ ಮುಂಭಾಗ ನಡೆದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡ ಲಿಷಾಗೆ 4 ತಿಂಗಳಲ್ಲಿ ಸರ್ಕಾರಿ ಉದ್ಯೋಗ ...
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು:  2013ರ ಏಪ್ರಿಲ್‌ 17ರಂದು ಮಲ್ಲೇಶ್ವರದ ಬಿಜೆಪಿ ಕಚೇರಿ ಮುಂಭಾಗ ನಡೆದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡ ಲಿಷಾಗೆ 4 ತಿಂಗಳಲ್ಲಿ ಸರ್ಕಾರಿ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಭಯೋತ್ಪಾದನಾ ಕೃತ್ಯಗಳಲ್ಲಿ ಸಂತ್ರಸ್ತರಾದವರಿಗೆ ಪರಿಹಾರ ನೀಡುವ ದಿಸೆಯಲ್ಲಿ ರಾಷ್ಟ್ರೀಯ ನೀತಿ  ರೂಪಿಸಬೇಕು ಹಾಗೂ ನನಗೆ  ಒಂದು ಕೋಟಿ ರು, ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಲಿಷಾ ಪರ ವಕೀಲ ಸುನೀಲ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ  ಸೋಮವಾರ ವಿಲೇವಾರಿ ಮಾಡಿದೆ.

ಘಟನೆಗೆ  ಗುಪ್ತಚರ ವಿಭಾಗದ ವೈಫಲ್ಯ ಕಾರಣ ಎಂಬ ಅರ್ಜಿದಾರರ ಆರೋಪವನ್ನು ಕುರುಡಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ   ಘಟನೆಯಲ್ಲಿ ಲಿಷಾ ಶೇಕಡ 50ಕ್ಕೂ ಹೆಚ್ಚು ಪ್ರಮಾಣದ ಅಂಗವಿಕಲತೆಗೆ ಒಳಗಾಗಿದ್ದಾಳೆ ಮತ್ತು  ಇದು ಈಕೆಯ ಭವಿಷ್ಯಕ್ಕೆ ಭಾರಿ ಪೆಟ್ಟು ನೀಡಿದೆ. ಆದ್ದರಿಂದ ಕೇಂದ್ರ ಸರ್ಕಾರ ಪರಿಹಾರದ ಮೊತ್ತವನ್ನು ಅತ್ಯಂತ ವಿವೇಚನೆಯಿಂದ ನಿರ್ಧರಿಸಬೇಕು’ ಎಂದೂ ಆದೇಶದಲ್ಲಿ ವಿವರಿಸಲಾಗಿದೆ.

ಅಂಗವಿಕಲ ಕೋಟಾದಡಿ ಲಿಷಾಗೆ ಸರ್ಕಾರಿ ಉದ್ಯೋಗ ನೀಡಿ, ಬಾಕಿಯಿರುವ ಆಕೆಯ ಆಸ್ಪತ್ರೆ ವೆಚ್ಚವನ್ನು ಭರಿಸಬೇಕೆಂದು ಸರ್ಕಾರಕ್ಕೆ ಹೈ ಕೋರ್ಟ್ ನಿರ್ದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com