ನವೆಂಬರ್ 21 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ನವೆಂಬರ್‌ 21ರಿಂದ ಡಿಸೆಂಬರ್‌ 2ರ ವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು...
ಬೆಳಗಾವಿ ಸುವರ್ಣ ಸೌಧ
ಬೆಳಗಾವಿ ಸುವರ್ಣ ಸೌಧ
Updated on

ಬೆಂಗಳೂರು:  ನವೆಂಬರ್‌ 21ರಿಂದ ಡಿಸೆಂಬರ್‌ 2ರ ವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ನ. 21ರ ಸೋಮವಾರ ಆರಂಭವಾಗಿ ನವೆಂಬರ್ 25 ರ ವರೆಗೆ ನಡೆಯಲಿದೆ, ನಂತರ ಶನಿವಾರ ಮತ್ತು ಭಾನುವಾರ ರಜೆ ಇದ್ದು ಮತ್ತೆ ನವೆಂಬರ್ 28 ರಂದು ಆರಂಭವಾಗುವ ಕಲಾಪ ಡಿ. 2 ರಂದು ಅಂತ್ಯವಾಗಲಿದೆ. ಒಟ್ಟು 10 ದಿನಗಳ ಕಾಲ ವಿಧಾನ ಮಂಡಲದ ಕಲಾಪಗಳು ನಡೆಯಲಿವೆ.

ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ದಿನಾಂಕ ನಿಗದಿಪಡಿಸುವ ಕುರಿತು ಈಗಾಗಲೇ ವಿಧಾನಸಭೆ ಸ್ಪೀಕರ್‌ ಮತ್ತು ವಿಧಾನ ಪರಿಷತ್‌ ಸಭಾಪತಿ ಜತೆ ಚರ್ಚಿಸಿದ ಬಳಿಕ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com