ಉಪಚುನಾವಣೆಗೆ ಸ್ಪರ್ಧಿಸಲಿರುವ ಶ್ರೀನಿವಾಸ್ ಪ್ರಸಾದ್: ಬೆಂಬಲಿಗರ ಸಭೆಯಲ್ಲಿ ಘೋಷಣೆ

ಬೆಂಬಲಿಗರೊಂದಿಗೆ ಮೊದಲ ಸಭೆ ನಡೆಸಿರುವ ಮಾಜಿ ಸಚಿವ, ಶಾಸಕ ಶ್ರೀನಿವಾಸ್ ಪ್ರಸಾದ್ ಉಪಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಶ್ರೀನಿವಾಸ್ ಪ್ರಸಾದ್
ಶ್ರೀನಿವಾಸ್ ಪ್ರಸಾದ್

ಮೈಸೂರು: ವಿಧಾನಸಭಾಧ್ಯಕ್ಷ ಕೆಬಿ ಕೋಳಿವಾಡ ತಮ್ಮ ರಾಜಿನಾಮೆಯನ್ನು ಅಂಗೀಕರಿಸಿದ ಬೆನ್ನಲ್ಲೇ ಬೆಂಬಲಿಗರೊಂದಿಗೆ ಮೊದಲ ಸಭೆ ನಡೆಸಿರುವ ಮಾಜಿ ಸಚಿವ, ಶಾಸಕ ಶ್ರೀನಿವಾಸ್ ಪ್ರಸಾದ್ ಉಪಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ನಂಜನಗೂಡಿನ ಐಬಿಯಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸಿರುವ ಶ್ರೀನಿವಾಸ್ ಪ್ರಸಾದ್ ಉಪಚುನಾವಣೆಗೆ ಸ್ಪರ್ಧಿಸುತ್ತಿರುವುದು ಖಚಿತವಾಗಿದೆ. ಉಪಚುನಾವಣೆಗೆ ಸ್ಪರ್ಧಿಸುತ್ತಿರುವ ಬಗ್ಗೆ ಘೋಷಣೆ ಮಾಡಿರುವ ಶ್ರೀನಿವಾಸ್ ಪ್ರಸಾದ್, ಯಾವ ಪಕ್ಷದಿಂದ ಸ್ಪರ್ಧಿಸಬೇಕೆಂಬುದನ್ನು ಇನ್ನೂ ನಿರ್ಧರಿಸಿಲ್ಲ. ಉಪಚುನಾವಣೆ ಘೋಷಣೆಯಾದ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸಬೇಕೆಂಬುದನ್ನು ನಿರ್ಧರಿಸುವುದಾಗಿ ತಿಳಿಸಿದ್ದಾರೆ.

ಸಂಪುಟ ಪುನಾರಚನೆ ವೇಳೆ ಸಿಎಂ ತಮ್ಮನ್ನು ನಡೆಸಿಕೊಂಡಿದ್ದರ ಬಗ್ಗೆ ಅಸಮಾಧಾನಗೊಂಡಿದ್ದ ಶ್ರೀನಿವಾಸ್ ಪ್ರಸಾದ್ ಅಕ್ಟೋಬರ್ 17 ರಂದು ಶಾಸಕ ಸ್ಥಾನಕ್ಕೆ ನೀಡಿದ್ದರು. ಅ.20 ರಂದು ಸ್ಪೀಕರ್ ಕೋಳಿವಾಡ ಶ್ರೀನಿವಾಸ್ ಪ್ರಸಾದ್ ಅವರ ರಾಜಿನಾಮೆಯನ್ನು ಅಂಗೀಕರಿಸಿದ್ದರು. ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ ಬೆಂಬಲಿಗರೊಂದಿಗೆ ಸಭೆ ನಡೆಸಿರುವ ಮಾಜಿ ಶಾಸಕರು ಉಪಚುನಾವಣೆಗೆ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com