ಬೆಂಗಳೂರು: ಪಾರ್ಟಿ ಮುಗಿಸಿಕೊಂಡು ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಕಾರಿನಲ್ಲಿ ಬರುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.
ನೆಲಮಂಗಲದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು ಕಾರು ವೇಗವಾಗಿ ಹೋಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ವಿಭಜಕದತ್ತ ನುಗ್ಗಿ ಟ್ರಕ್ ಗೆ ಢಿಕ್ಕಿ ಹೊಡೆಯಿತು. ವಿದ್ಯಾರ್ಥಿಗಳು ತುಮಕೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ಮೊಹಮ್ಮದ್ ಆಶಿಕ್ ಮತ್ತು ಲಿನು ಮರಿಯಾ ಜಾಯ್ ಎಂದು ಗುರುತಿಸಲಾಗಿದೆ. ಇವರು ತುಮಕೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದರು. ಆಶಿಕ್ ಕೇರಳದ ಕೋಝಿಕ್ಕೋಡಿನವರಾದರೆ ಲಿಲು ಹೈದರಾಬಾದಿನವರಾಗಿದ್ದಾರೆ.
ಕಳೆದ ಮಧ್ಯರಾತ್ರಿ 12.15ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ನೆಲಮಂಗಲ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.