ಕಾವೇರಿ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಕೆಆರ್ ಎಸ್, ಕಬಿನಿಯಿಂದ ನೀರು ಬಿಡಲು ಸಿಎಂ ಆದೇಶ

ಕಾವೇರಿ ಅಚ್ಚುಕಟ್ಟು ಪ್ರದೇಶದ ಕೃಷಿ ಬೆಳೆಗಳಿಗೆ ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ ನೀರು ಬಿಡುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ....
ಕೆಆರ್ ಎಸ್ ಜಲಾಶಯ
ಕೆಆರ್ ಎಸ್ ಜಲಾಶಯ
Updated on

ಮೈಸೂರು: ಕಾವೇರಿ ಅಚ್ಚುಕಟ್ಟು ಪ್ರದೇಶದ ಕೃಷಿ ಬೆಳೆಗಳಿಗೆ ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ ನೀರು ಬಿಡುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ನಂಜನಗೂಡಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸೋಮವಾರದಿಂದ ಜಲಾಶಯಗಳಿಂದ ನೀರು ಬಿಡುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸರ್ಕಾರ ಕೃಷಿಗೆ ನೀರು ಬಿಡದಿದ್ದರೇ ಅಕ್ಟೋಬರ್ 27 ರಿಂದ  ಕೆಆರ್ ಎಸ್ ಮತ್ತು ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರು ಪ್ರತಿಭಟನೆ ನಡೆಸುವ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ನೀರು ಬಿಡುಗಡೆಗೆ ಸೂಚಿಸಲಾಗಿದೆ.

ಸೋಮವಾರದಿಂದ  ಬೆಳೆಗಳಿಗೆ ನೀರು ಬಿಟ್ಟರೇ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ, 82 ಅಡಿ ತಲುಪಲಿದೆ ಎಂದು ಸಚಿವ ಎಂ.ಕೃಷ್ಣಪ್ಪ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com