ಖುಲಾಸೆಗೊಂಡ ಮಾತ್ರಕ್ಕೆ ಯಡಿಯೂರಪ್ಪ ನಿರಪರಾಧಿ ಅಲ್ಲ: ಸಿಎಂ ಸಿದ್ದರಾಮಯ್ಯ

ಯಡಿಯೂರಪ್ಪ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಖುಲಾಸೆಗೊಂಡ ಮಾತ್ರಕ್ಕೆ ಯಡಿಯೂರಪ್ಪ ತಪ್ಪು ಮಾಡಿಲ್ಲ ಎಂದಲ್ಲ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ನವದೆಹಲಿ: ಮೈನಿಂಗ್ ಕಂಪನಿಗೆ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆದ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಖುಲಾಸೆಗೊಂಡ ಮಾತ್ರಕ್ಕೆ ಯಡಿಯೂರಪ್ಪ ತಪ್ಪು ಮಾಡಿಲ್ಲ ಎಂದಲ್ಲ ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆಯಿಂದ ಯಡಿಯೂರಪ್ಪ ಅವರನ್ನು ಖುಲಾಸೆಗೊಳಿಸಲಾಗಿದೆ. ಖುಲಾಸೆಗೊಂಡ ಮಾತ್ರಕ್ಕೆ ಯಡಿಯೂರಪ್ಪ ತಪ್ಪೇ ಮಾಡಿಲ್ಲ ಎಂದಲ್ಲ. ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆಯಿಂದ ಖುಲಾಸೆಗೊಂಡರೆ ಕೊಲೆಯೇ ನಡೆದಿಲ್ಲ ಎನ್ನಲಾಗುತ್ತದೆಯೇ? ಎಂದಿರುವ ಸಿಎಂ ಕಿಕ್ ಬ್ಯಾಕ್ ಪ್ರಕರಣದಲ್ಲೂ ಯಡಿಯೂರಪ್ಪ ಅವರನ್ನು ಖುಲಾಸೆ ಮಾಡಿದ ಮಾತ್ರಕ್ಕೆ ಅವರು ತಪ್ಪು ಮಾಡಿಲ್ಲ ಎನ್ನಲು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನು ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಅಭಿಪ್ರಾಯ ಕೇಳಿಬರುತ್ತಿರುವ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬುದನ್ನು ರಾಜ್ಯದ ಜನ ನಿರ್ಧರಿಸುತ್ತಾರೆಯೇ ಹೊರತು ಬಿಜೆಪಿ ಅಥವಾ ಯಡಿಯೂರಪ್ಪ ಅಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com