
ಬೆಳಗಾವಿ: ಕೆಲವು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಕಿರಿಯ ಸಹೋದರ ಯಲ್ಲಪ್ಪ ಹಂಡಿಭಾಗ್(28) ಸಹ ಅ.27 ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕುಲಗೋಡು ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಯಲ್ಲಪ್ಪ ಹಂಡಿಭಾಗ್, ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಕಲ್ಲಪ್ಪ ಹಂಡಿಭಾಗ್ ಅವರ ಕಿರಿಯ ಸಹೋದರ 2008 ರಲ್ಲಿ ಪೇದೆಯಾಗಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಕುಲಗೋಡು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Advertisement