

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಂಬಂಧಿಸಿದಂತೆ ತಜ್ಞರ ಸಮಿತಿ ರೂಪಿಸಿರುವ ಮಾರ್ಗಸೂಚಿಗಳನ್ನು ಶೀಘ್ರವೇ ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಬಿ.ವಿ.ಸತ್ಯನಾರಾಯಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರಿದ್ದ ಏಕಸದಸ್ಯ ಪೀಠವು ಗುರುವಾರ ವಿಲೇವಾರಿ ಮಾಡಿದ್ದು, ಅರ್ಜಿದಾರರನ್ನು ಪ್ರಶಸ್ತಿಗೆ ಪರಿಗಣಿಸುವಂತೆ ಆದೇಶಿಸಿದೆ.
ಇದೇ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರನ್ನು ಪ್ರಶ್ನಿಸಿದ ನಜೀರ್, ಈ ಬಾರಿ ಸತ್ಯನಾರಾಯಣ ಅವರನ್ನ ಪ್ರಶಸ್ತಿಗೆ ಪರಿಗಣಿಸಿದ್ದೀರೊ ಇಲ್ಲವೊ ಎಂದು ಪ್ರಶ್ನಿಸಿದರು. ಇದಕ್ಕೆ ಶಿವಣ್ಣ, ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.