

ಮೈಸೂರು: ಕಳೆದ ಎರಡು ವಾರಗಳಲ್ಲಿ 81 ಮಕ್ಕಳು ಆನ್ ಲೈನ್ ನಲ್ಲಿ ಲೈಂಗಿಕ ದೌರ್ಜನ್ಯ ದೂರುಗಳು ದಾಖಲಾಗಿವೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಮನೇಕಾ ಗಾಂಧಿ ತಿಳಿಸಿದ್ದಾರೆ.
ಮೈಸೂರಿನ ಜೆಎಸ್ ಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಅನುಕೂಲ ವಾಗಲೆಂಬ ದೃಷ್ಟಿಯಿಂದ ಮಹಿಳಾ ಮತ್ತು ಮಕ್ಕಳ ಇಲಾಖೆ ಪೋಕ್ಸೋ- ಇ- ಬಾಕ್ಸ್ ಸಹಾಯವಾಣಿ ಆರಂಭಿಸಿದೆ ಎಂದರು.
ತೊಂದರೆ ಅನುಭವಿಸುತ್ತಿರುವ ಸಂತ್ರಸ್ತರಿಗೆ ಸ್ಥಳೀಯ ಪೊಲೀಸರ ನೆರವಿನಿಂದ ಸಹಾಯ ಮಾಡಲು ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ದೂರು ದಾಖಲಿಸಿದವರು ಹೆಸರು ವಿಳಾಸ, ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ. ಆದರೆ 81 ಮಕ್ಕಳು ದೂರು ದಾಖಲಾಗಿರುವು ನನಗೆ ಬೇಸರ ತರಿಸಿದೆ ಎಂದು ಹೇಳಿದ್ದಾರೆ.
ಕಾಲೇಜುಗಳಲ್ಲಿ ಹೆಣ್ಣು ಮಕ್ಕಳ ಜೊತೆ ಗಂಡು ಮಕ್ಕಳು ಗೌರವ ಹಾಗೂ ವಿನಯದಿಂದ ನಡೆದುಕೊಳ್ಳುವುದನ್ನು ಕಲಿಸಿಕೊಡಬೇಕು ಎಂದು ಅವರು ತಿಳಿಸಿದರು.