ಉಕ್ಕಿನ ಸೇತುವೆ ವಿವಾದ: ಸಿಎಂ ವಿರುದ್ಧ ತನಿಖೆ ಮಾಡುವಂತೆ ಸುಪ್ರಿಂ ಕೋರ್ಟ್ ವಕೀಲರ ಮನವಿ

ವಿರೋಧದ ನಡುವೆ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ವಕೀಲ ಕೆ.ವಿ ...
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿರೋಧದ ನಡುವೆ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ವಕೀಲ ಕೆ.ವಿ ಧನಂಜಯ್ ಆಗ್ರಹಿಸಿದ್ದಾರೆ.

ಈ ಯೋಜನೆ ಭ್ರಷ್ಟಾಚಾರದಿಂದ ಕೂಡಿದೆ, ಹೀಗಾಗಿ ಸಿಎಂ ಸಿದ್ದರಾಮಯ್ಯ ಮತ್ತು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇದು ಕರ್ನಾಟಕದ ಜನತೆಗೆ ಸಿಎಂ ಸಿದ್ದರಾಮಯ್ಯ ಮಾಡುತ್ತಿರುವ ಅವಮಾನ ಂದು ಆರೋಪಿಸಿರುವ ಅವರು.ಇದೊಂದು ಭ್ರಷ್ಟ ಯೋಜನೆಯಾಗಿದೆ, ಆದರೂ ಇದನ್ನು ಮಾಡಿಯೇ ತೀರುವುದಾಗಿ ಹೇಳುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಕೆ.ಜೆ ಜಾರ್ಜ್ ವಿರುದ್ಧ ಕ್ರಿಮಿನಲ್ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.

ಉಕ್ಕಿನ ಸೇತುವೆ ನಿರ್ಮಾಣ ಸಾಮೂಹಿಕವಾಗಿ ಭ್ರಷ್ಟವಾಗಿದ್ದು, ಸರ್ಕಾರ ಎಲ್ಲಾ ಮಾಹಿತಿಗಳನ್ನು ಗೌಪ್ಯವಾಗಿಡುತ್ತಿದೆ ಎಂದು ಹೇಳಿದ್ದಾರೆ.

ಉಕ್ಕಿನ ಸೇತುವೆ ನಿರ್ಮಾಣ ಸಂಬಂಧ ಪ್ರಮುಖ ದಾಖಲಾತಿಗಳ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಾಪತ್ತೆ ಮಾಡಿದೆ ಎಂದು ಮಾಜಿ ಐಎಎಸ್ ಅಧಿಕಾರಿ ಎಂ.ಎನ್ ವಿಜಯ್ ಕುಮಾರ್ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com