ರಾಜ್ಯಾದ್ಯಂತ 61ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: ಬೆಳಗಾವಿಯಲ್ಲಿ ಬೃಹತ್ ಮೆರವಣಿಗೆ

61ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ರಾಜ್ಯಾದ್ಯಂತ ಕನ್ನಡ ಪರ ಸಂಘಟನೆಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ರಾಜಧಾನಿ ಬೆಂಗಳೂರು, ಬೆಳಗಾವಿ ಸೇರಿದಂತೆ ವಿವಿಧೆಡೆ ಬೃಹತ್ ಮೆರವಣಿಗೆ ನಡೆಸಲಾಗುತ್ತಿದೆ.
ರಾಜ್ಯೋಚ್ಸವ ಸಂಭ್ರಮ (ಸಂಗ್ರಹ ಚಿತ್ರ)
ರಾಜ್ಯೋಚ್ಸವ ಸಂಭ್ರಮ (ಸಂಗ್ರಹ ಚಿತ್ರ)
Updated on

ಬೆಂಗಳೂರು: 61ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ರಾಜ್ಯಾದ್ಯಂತ ಕನ್ನಡ ಪರ ಸಂಘಟನೆಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ರಾಜಧಾನಿ ಬೆಂಗಳೂರು, ಬೆಳಗಾವಿ ಸೇರಿದಂತೆ ವಿವಿಧೆಡೆ  ಬೃಹತ್ ಮೆರವಣಿಗೆ ನಡೆಸಲಾಗುತ್ತಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಕನ್ನಡ ಹಾಗೂ ರಾಷ್ಟ್ರಧ್ವಜವನ್ನು ಹಾರಿಸುವ  ಮೂಲಕ ಗೌರವ ಸೂಚಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ವಿವಿಧ ಶಾಲಾ-ಕಾಲೇಜುಗಳ ಕಲಾ ತಂಡಗಳು ವಿಶೇಷ ಪ್ರದರ್ಶನ ನೀಡಿದವು.

ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಸುಮಾರು 100 ಅಧಿಕ ಕಲಾ ತಂಡಗಳು ಬೆಳಗಿನಿಂದ ಸಂಜೆ ವರೆಗೂ ಬೃಹತ್  ಮೆರವಣಿಗೆಯನ್ನು ಹಮ್ಮಿಕೊಂಡಿವೆ. ಸ್ಥಳೀಯ ಶಾಲಾ-ಕಾಲೇಜುಗಳು ಸೇರಿದಂತೆ 100ಕ್ಕೂ ಹೆಚ್ಚು ಕಲಾತಂಡಗಳು ಸ್ಥಬ್ಧಚಿತ್ರ ಪ್ರದರ್ಶನ ನಡೆಸುತ್ತಿವೆ. ಇನ್ನು ಹಾಸನದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎ ಮಂಜು ಅವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ವಿವಿಧ ಕಾಲ ತಂಡಗಳು ಪಥ ಸಂಚಲನ  ಹಾಗೂ ಮೆರವಣಿಗೆ ನಡೆಸಿದವು.

ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಅವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಜಿಲ್ಲಾ ಪೊಲೀಸರು ಪಥ ಸಂಚಲನ  ನಡೆಸಿ ಗೌರವ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com