ಶಾಂತಿಯುತ ಗಣೇಶ ಹಬ್ಬ, ಬಕ್ರೀದ್ ಆಚರಣೆಗೆ ಆಯುಕ್ತರ ಮನವಿ

ಗಣೇಶ ಮತ್ತು ಬಕ್ರೀದ್ ಹಬ್ಬಗಳ ಆಚರಣೆ ಸಂದರ್ಭದಲ್ಲಿ ನಗರದಲ್ಲಿ ಕಾನೂನು, ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ...
ನಗರದಲ್ಲಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿರುವುದನ್ನು ಪೊಲೀಸರು ತಪಾಸಣೆ ನಡೆಸುತ್ತಿರುವುದು.
ನಗರದಲ್ಲಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿರುವುದನ್ನು ಪೊಲೀಸರು ತಪಾಸಣೆ ನಡೆಸುತ್ತಿರುವುದು.
Updated on
ಬೆಂಗಳೂರು: ಗಣೇಶ ಮತ್ತು ಬಕ್ರೀದ್ ಹಬ್ಬಗಳ ಆಚರಣೆ ಸಂದರ್ಭದಲ್ಲಿ ನಗರದಲ್ಲಿ ಕಾನೂನು, ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ತಿಳಿಸಿದ್ದಾರೆ.
ವಿವಿಧ ಸಮುದಾಯಗಳ ಮುಖಂಡರ ಜೊತೆ ಶಾಂತಿ ಸಮಿತಿ ಸಭೆ ನಡೆಸಿದ ಅವರು, ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕರಿಸಬೇಕೆಂದು ಕೋರಿದರು.
 ಸೆಪ್ಟೆಂಬರ್ 12ರಂದು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಡ್ರಾಗ್ ರೇಸಿಂಗ್ ಮತ್ತು ವೀಲಿಂಗ್ ಗೆ ಕಡಿವಾಣ ಹಾಕಲು ಪೊಲೀಸರು ಗಸ್ತನ್ನು ತೀವ್ರಗೊಳಿಸಲಿದ್ದಾರೆ ಎಂದು ಮೇಘರಿಕ್ ತಿಳಿಸಿದರು.
ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಬೆಸ್ಕಾಂ, ಅಗ್ನಿಶಾಮಕ ಮತ್ತು ತುರ್ತು ಸೇವೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು. ನಗರದಾದ್ಯಂತ ಎಲ್ಲೆಲ್ಲ ಗಣೇಶನನ್ನು ಕೂರಿಸಿರುತ್ತಾರೋ, ನಂತರ ವಿಸರ್ಜನೆಗೆ ಗಣೇಶನ ವಿಗ್ರಹಗಳನ್ನು ಸಂಗ್ರಹಿಸಲು ಬಿಬಿಎಂಪಿ ವಾಹನದ ವ್ಯವಸ್ಥೆ ಮಾಡಲಿದೆ ಎಂದು ಮಂಜುನಾಥ್ ಪ್ರಸಾದ್ ತಿಳಿಸಿದರು.
ಹಬ್ಬದ ಆಚರಣೆಗೆ ವೇದಿಕೆಯನ್ನು ಸಜ್ಜುಗೊಳಿಸುವ ಸಂಘಟಕರು ಅಗ್ನಿಶಾಮಕ ಮತ್ತು ತುರ್ತುಸೇವೆ ಇಲಾಖೆಯಿಂದ ಕಡ್ಡಾಯವಾಗಿ ನಿರಪೇಕ್ಷಣಾ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com