ಮೈಸೂರು ವಿವಿ ಉಪಕುಲಪತಿ ರಂಗಪ್ಪ ವಿರುದ್ಧ ಎಫ್ಐಆರ್'ಗೆ ಹೈಕೋರ್ಟ್ ತಡೆ

ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ಗುರುವಾರ ತಡೆ...
ಹೈಕೋರ್ಟ್
ಹೈಕೋರ್ಟ್
Updated on

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ಗುರುವಾರ ತಡೆ ನೀಡಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಹಣಕಾಸು ವಿಭಾಗದಲ್ಲಿ ಅವ್ಯವಹಾರ ನಡೆಸಿದ್ದಾರೆಂದು ಹೇಳಿ ಕೆಲ ದಿನಗಳ ಹಿಂದಷ್ಟೇ ರಂಗಪ್ಪ ಸೇರಿದಂತೆ 7 ಮಂದಿ ವಿರುದ್ಧ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ರಾಜ್ಯಪಾಲರ ಸೂಚನೆಯಂತೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು.

ಇದರಂತೆ ಎಫ್ಐಆರ್ ರದ್ದು ಕೋರಿ ರಂಗಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ನಿನ್ನೆ ಪರಿಶೀಲನೆ ನಡೆಸಿರುವ ಹೈಕೋರ್ಟ್ ಎಫ್ಐಆರ್ ಗೆ ತಡೆ ನೀಡಿ ಆದೇಶ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com