ಎಲ್ಲೆಡೆ ಗೌರಿ ಹಬ್ಬದ ಸಂಭ್ರಮ, ಗಣೇಶನ ಪೂಜೆಗೆ ತಯಾರಿ

ನಾಡಿನಾದ್ಯಂತ ಗೌರಿ, ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಭಾನುವಾರ ಬೆಳಗ್ಗೆಯಿಂದಲೇ ದೇವಾಲಯಗಳಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಎಲ್ಲೆಲ್ಲೂ ಇಂದು ಮತ್ತು ನಾಳೆ ಗೌರಿ, ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ.  ಬೆಳಗ್ಗೆಯಿಂದಲೇ ದೇವಾಲಯಗಳಲ್ಲಿ ಭಕ್ತರು ಸಾಲುಗಟ್ಟಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಗೌರಿಗೆ ಸುಮಂಗಲಿಯರು ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸುತ್ತಿರುವ ದೃಶ್ಯ ಅಲ್ಲಲ್ಲಿ ಕಂಡುಬರುತ್ತಿದೆ. ಮನೆ, ಮನೆಗಳಲ್ಲಿ ರಂಗೋಲಿ ಬಿಡಿಸಿ, ತಳಿರು ತೋರಣ ಕಟ್ಟಿದ್ದಾರೆ. ಗೌರಿ ಮೂರ್ತಿಗೆ ಹೂವಿನ ಅಲಂಕಾರ ಮಾಡಿ ಬಾಗಿನ ಸಿದ್ದಪಡಿಸಿ,  ಭಕ್ತಿಯಿಂದ ಪೂಜೆ ಸಲ್ಲಿಸಿದರು.
ಗೌರಿ ಗಣೇಶ ಹಬ್ಬಕ್ಕೆ ಹೂವು, ಹಣ್ಣು ಖರೀದಿಗೆ ತೆರಳಿದ ಗ್ರಾಹಕರಿಗೆ ಹಬ್ಬದ ಬಿಸಿ ತಟ್ಟಿದೆ. ಹೂವು, ಹಣ್ಣುಗಳ ಬೆಲೆ ಸಾಮಾನ್ಯ ದಿನಗಳಿಗಿಂತ ಹೆಚ್ಚಾಗಿದೆ.
ಗೌರಿ, ಗಣೇಶ ಹಬ್ಬಕ್ಕೆ ತಮ್ಮ ಹುಟ್ಟಿದೂರಿಗೆ ತೆರಳುವ ಮಂದಿಗೆ ಕೂಡ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣದ ದರ ಏರಿಕೆಯ ಬಿಸಿ ತಟ್ಟಿದೆ. ಎಂದಿನ ದರಕ್ಕಿಂತ ಪ್ರಯಾಣ ದರ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಸೇರಿದಂತೆ ಕರ್ನಾಟಕದಾದ್ಯಂತ ಮನೆ, ಮನೆಗಳಲ್ಲೂ ಗೌರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಗೌರಿಗೆ ಅರಶಿನ, ಕುಂಕುಮ ಕಟ್ಟಿ ಆಶೀರ್ವಾದ ಪಡೆದರು.
ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದಲ್ಲೂ ಮಹಿಳೆಯರು ವಿಶೇಷ ಪೂಜೆ ಸಲ್ಲಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com