
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂ ಇಂದು ಆದೇಶ ಹೊರಡಿಸುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯದ ಬಳಿ ಸೋಮವಾರ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಶೇ.50 ರಷ್ಟು ನೀರನ್ನು ಬಿಡುವಂತೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಸುಪ್ರೀಂ ಆದೇಶ ನೀಡುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಿರುವ ಅಧಿಕಾರಿಗಳು ಈಗಾಗಲೇ ಬೃಂದಾವನ ಉದ್ಯಾನವನ, ಉತ್ತರ ದ್ವಾರ, ಕಾವೇರಿ ಪ್ರತಿಮೆ ಮತ್ತು ಇನ್ನಿತರೆ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಐಜಿಪಿ (ದಕ್ಷಿಣ ವಿಭಾಗ) ಬಿ.ಕೆ. ಸಿಂಗ್ ಅವರು, ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ರಾಜ್ಯದ ವಿರುದ್ಧವೇನಾದರೂ ಆದೇಶ ಹೊರಬಿದ್ದಿದ್ದೇ ಆದರೆ, ಪರಿಸ್ಥಿತಿ ಹದಗೆಡುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತೆ ವಹಿಸಲಾಗಿದೆ ಎಂದು ಹೇಳಿದ್ದಾರೆ.
Advertisement