ಕಾವೇರಿ ವಿವಾದ: ಕರ್ನಾಟಕ್ಕೆ ಅನ್ಯಾಯವಾಗಿದೆ, ಸುಪ್ರೀಂನಲ್ಲಿ ಹೋರಾಟ ಮಾಡುತ್ತೇವೆ- ಕಾಂಗ್ರೆಸ್

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ರಾಜ್ಯಕ್ಕೆ ಅನ್ಯಾಯವಾಗಿದೆ, ಸುಪ್ರೀಂಕೋರ್ಟ್ ನಲ್ಲಿನ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆಂದು ಕಾಂಗ್ರೆಸ್ ಮಂಗಳವಾರ ಸ್ಪಷ್ಟಪಡಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ರಾಜ್ಯಕ್ಕೆ ಅನ್ಯಾಯವಾಗಿದೆ, ಸುಪ್ರೀಂಕೋರ್ಟ್ ನಲ್ಲಿನ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆಂದು ಕಾಂಗ್ರೆಸ್ ಮಂಗಳವಾರ ಸ್ಪಷ್ಟಪಡಿಸಿದೆ.

ಈ ಕುರಿತಂತೆ ಮಾತನಾಡಿರುವ ಸಂಸದ ಕೆ.ಹೆಚ್. ಮುನಿಯಪ್ಪ ಅವರು, ನಾವು ಕಾನೂನನ್ನು ಪಾಲಿಸುವ ಜನರಾಗಿದ್ದು, ಸುಪ್ರೀಂ ಆದೇಶದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕಾವೇರಿ ಕುರಿತು ಸುಪ್ರೀಂ ನೀಡಿರುವ ಆದೇಶವನ್ನು ಪರಿಶೀಲಿಸಲಾಗುತ್ತದೆ. ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸುತ್ತಿದ್ದಾರೆಂದು ಹೇಳಿದ್ದಾರೆ.

ರಾಜ್ಯದಲ್ಲಿಯೇ ಇಂದು ನೀರಿನ ಅಭಾವ ಉಂಟಾಗಿದೆ. ಪರಿಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸುವುದು ಸಾಧ್ಯವಾಗುವುದಿಲ್ಲ. ಸುಪ್ರೀಂಕೋರ್ಟ್ ನಲ್ಲಿ ಹೋರಾಟ ಮುಂದುವರೆಸುತ್ತೇವೆಂದು ಸಂಸದ ವೀರಪ್ಪ ಮೊಯ್ಲಿಯವರು ಹೇಳಿದ್ದಾರೆ.

ಕರ್ನಾಟಕದಲ್ಲಿ ಪ್ರಸ್ತುತ ವರ್ಷ ಮುಂಗಾರು ಮಳೆಯ ಅಭಾವ ಉಂಟಾಗಿದ್ದು, ತಮಿಳುನಾಡಿಗೆ ಪಾಲಿನಷ್ಟು ನೀರನ್ನು ಬಿಡಲು ಸಾಧ್ಯವಿಲ್ಲ ಎಂದು ಈ ಹಿಂದೆ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿತ್ತು. ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ತಮಿಳುನಾಡು ಕೆಆರ್ ಎಸ್ ನಿಂದ 50 ಟಿಎಂಸಿ ಅಡಿ ನೀರು ಬೇಕೆಂದು ಹೇಳಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ನಿನ್ನೆ ಪರಿಶೀಲನೆ ನಡೆಸಿದ್ದ ಸುಪ್ರೀಂಕೋರ್ಟ್ ಮುಂದಿನ 10 ದಿನಗಳ ಕಾಲ ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯಕ್ಕೆ ಸೂಚನೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com