ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಕನ್ನಡ ಪರ ಸಂಘಟನೆಗಳು ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಈ ಬಂದ್ ಗೆ ಕೇಬಲ್ ಆಪರೇಟರ್ಸ್ ಗಳು ಬೆಂಬಲ ನೀಡಿದ್ದಾರೆ.
ಸೆಪ್ಟೆಂಬರ್ 9ರಂದು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಮಿಳು ಚಾನೆಲ್ ಗಳ ಪ್ರಸಾರವನ್ನು ಸ್ಧಗಿತಗೊಳಿಸಲು ಕೇಬಲ್ ಆಪರೇಟರ್ ಗಳು ನಿರ್ಧರಿಸಿದ್ದಾರೆ.
ಸೆಪ್ಟೆಂಬರ್ 9 ರಂದು ಸುಮಾರು 52 ತಮಿಳು ಚಾನೆಲ್ ಗಳು ರಾಜ್ಯದಲ್ಲಿ ಪ್ರಸಾರವಾಗುವ ಸಾಧ್ಯತೆಗಳು ಕಡಿಮೆ ಇದೆ.