ಬೆಂಗಳೂರು: ಕಾವೇರಿ ಜಲ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ಹಾಗೂ ರಾಜ್ಯದ ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್ ಅವರು ದೆಹಲಿಗೆ ತೆರಳಿದ್ದು, ಸರ್ವೋಚ್ಛ ನ್ಯಾಯಾಲಯ ಹಾಗೂ ಮೇಲುಸ್ತುವಾರಿ ಸಮಿತಿಯ ಮುಂದೆ ರಾಜ್ಯದ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ ಎಂದು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಶನಿವಾರ ತಿಳಿಸಿದ್ದಾರೆ.