ಅಪ್ಸರಕೊಂಡ ಸಮುದ್ರದಲ್ಲಿ ಮುಳುಗಿ ನಗರದ 3 ವಿದ್ಯಾರ್ಥಿಗಳು ಸಾವು

ಬೆಂಗಳೂರು ಮೂಲದ 3 ವಿದ್ಯಾರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಪ್ಸರಕೊಂಡ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯೊಂದು...
ಅಪ್ಸರಕೊಂಡ ಸಮುದ್ರ (ಸಂಗ್ರಹ ಚಿತ್ರ)
ಅಪ್ಸರಕೊಂಡ ಸಮುದ್ರ (ಸಂಗ್ರಹ ಚಿತ್ರ)
Updated on: 

ಕಾರವಾರ: ಬೆಂಗಳೂರು ಮೂಲದ 3 ವಿದ್ಯಾರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಪ್ಸರಕೊಂಡ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯೊಂದು ಭಾನುವಾರ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಗಳನ್ನು ಚೇತನ್ ಕುಮಾರ್ (22), ತೇಜಸ್ ಕುಮಾರ್ (22), ಎನ್. ಮೋಹನ್ (22) ಎಂದು ಗುರ್ತಿಸಲಾಗಿದೆ.

ನಗರದ ಆರ್.ವಿ. ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ 9 ವಿದ್ಯಾರ್ಥಿಗಳು ಎರಡು ಕಾರುಗಳಲ್ಲಿ ಅಪ್ಸರಕೊಂಡ ಜಲಪಾತ ನೋಡಲು ಹೋಗಿದ್ದಾರೆ. ಮಧ್ಯಾಹ್ನದ ವೇಳೆ ಜಲಪಾತದ ಹತ್ತಿರದಲ್ಲೇ ಇರುವ ಸಮುದ್ರದಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ಚೇತನ್, ತೇಜಸ್ ಹಾಗೂ ಮೋಹನ್ ಸಮುದ್ರದಲ್ಲಿ ಮುಳುಗಿದ್ದಾರೆ. ಉಳಿದ 6 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂವರು ಗೆಳೆಯರು ಮುಳುಗುತ್ತಿರುವುದನ್ನು ಗಮನಿಸಿದ ಉಳಿದ ವಿದ್ಯಾರ್ಥಿಗಳು ಅವರನ್ನು ರಕ್ಷಿಸಲು ಹೋಗಿದ್ದಾರೆ. ಈ ವೇಳೆ ಇವರೂ ಅಪಾಯದಂಚಿನಲ್ಲಿ ಸಿಲುಕಿಕೊಂಡಿದ್ದಾಗ ಸ್ಥಳೀಯರು ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.

ಮೂವರ ಪೈಕಿ ಓರ್ವ ಗೆಳೆಯನ್ನು ವಿದ್ಯಾರ್ಥಿಗಳು ರಕ್ಷಿಸಿದಾರಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಇಬ್ಬರ ಶವಕ್ಕಾಗಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸಿದಾಗ ಶವಗಳು ಪತ್ತೆಯಾಗಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com