ತಮಿಳಿಗರು ನೆಲೆಸಿರುವ ಪ್ರದೇಶಕ್ಕೆ ಬಿಗಿ ಭದ್ರತೆ - ಎಂ.ಎನ್. ಮೇಘರಿಕ್

ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಎರಡನೇ ಬಾರಿ ಕೂಡ ರಾಜ್ಯದ ವಿರುದ್ಧ ಸುಪ್ರೀಂ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ತಮಿಳಿಗರು ನೆಲೆಸಿರುವ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು...
ನಗರ ಪೊಲೀಸ್ ಆಯುಕ್ತ ಎಂ.ಎನ್. ಮೇಘರಿಕ್
ನಗರ ಪೊಲೀಸ್ ಆಯುಕ್ತ ಎಂ.ಎನ್. ಮೇಘರಿಕ್

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಎರಡನೇ ಬಾರಿ ಕೂಡ ರಾಜ್ಯದ ವಿರುದ್ಧ ಸುಪ್ರೀಂ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ತಮಿಳಿಗರು ನೆಲೆಸಿರುವ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್. ಮೇಘರಿಕ್ ಅವರು ಸೋಮವಾರ ಹೇಳಿದ್ದಾರೆ.

ಸುಪ್ರೀಂ ಆದೇಶ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಸುಪ್ರೀಂ ಆದೇಶ ಹಿನ್ನೆಲೆಯಲ್ಲಿ ಈಗಾಗಲೇ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಲ್ಲಿ ಹೆಚ್ಚಾಗಿ ನೆಲೆಸಿರುವ ತಮಿಳಿಗರ ಪ್ರದೇಶಗಳಿಗೆ ಭದ್ರತೆಯನ್ನು ಒದಗಿಸಲಾಗಿದೆ. ಶ್ರೀರಾಂಪುರ, ಓಕಳಿಪುರ, ಕಲಾಸಿಪಾಳ್ಯ ಮತ್ತು ಪ್ರಕಾಶ್ ನಗರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಮತ್ತೆ ರಾಜ್ಯದ ವಿರುದ್ಧ ಸುಪ್ರೀಂ ತೀರ್ಪು ನೀಡಿದ್ದು, ಸೆ.20 ರವರೆಗೂ ತಮಿಳುನಾಡಿಗೆ ಪ್ರತೀನಿತ್ಯ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು, ರಾಜ್ಯ ಹಾಗೂ ನಗರದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com