ಕಾವೇರಿ ವಿವಾದ: ವಾಟ್ಸಾಪ್ ಸಂದೇಶಗಳಿಂದ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದೆ- ಡಿಜಿಪಿ

ರಾಜ್ಯಾದ್ಯಂತ ಕಾವೇರಿ ಕಿಚ್ಚು ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ಕಾವು ತಾರಕಕ್ಕೇರಿದ್ದು, ಭದ್ರತೆಗಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ...
ಓಂ ಪ್ರಕಾಶ್
ಓಂ ಪ್ರಕಾಶ್

ಬೆಂಗಳೂರು: ರಾಜ್ಯಾದ್ಯಂತ ಕಾವೇರಿ ಕಿಚ್ಚು ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ಕಾವು ತಾರಕಕ್ಕೇರಿದ್ದು, ಭದ್ರತೆಗಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕೆಲವು ವಾಟ್ಸಾಪ್ ಸಂದೇಶಗಳಿಂದ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಹೇಳಿದ್ದಾರೆ. ಕೆಲ ಕಿಡಿಗೇಡಿಗಳು ವಾಟ್ಸಾಪ್ ದುರುಪಯೋಗ ಪಡಿಸಿಕೊಂಡು ಪ್ರಚೋದನೆ ನೀಡುತ್ತಿದ್ದಾರೆ. ಹೀಗಾಗಿ ಇಂಥಹ ಸುಳ್ಳು ಸುದ್ದಿಗಳಿಗೆ ಕಿವಿ ಗೊಡದೇ ಶಾಂತಿ ಕಾಪಾಡುವಂತೆ ಅವರು ಮನವಿ ಮಾಡಿದ್ದಾರೆ.

ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ ಎಂದು ಹೇಳಿದ್ದಾರೆ. ಇನ್ನು ರಾಜ್ಯದ ಜನತೆ ಶಾಂತಿ ಕಾಪಾಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಸಂಜೆ 5 ಗಂಟೆಯಿಂಗ ಬೆಂಗಳೂರು ನಗರಾದ್ಯಂತ ನಿಷೇದಾಜ್ಞೆ ಜಾರಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com