ಸುಪ್ರೀಂನಲ್ಲಿ ಮತ್ತೆ ಹಿನ್ನಡೆ: ರಾಜ್ಯದ ವಕೀಲರು ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ನೀಡಲಾಗಿದ್ದ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, ರಾಜ್ಯಕ್ಕೆ ಮತ್ತೆ...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ನೀಡಲಾಗಿದ್ದ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು, ರಾಜ್ಯಕ್ಕೆ ಮತ್ತೆ ಹಿನ್ನಡೆಯುಂಟಾಗಿದೆ.

ಸಾಕಷ್ಟು ಕುತೂಹಲ ಮೂಡಿಸಿದ್ದ ಕಾವೇರಿ ವಿವಾದ ಕುರಿತಂತೆ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ್ದ ಸುಪ್ರೀಂಕೋರ್ಟ್ ಸೆ.20 ರವರೆಗೂ ತಮಿಳುನಾಡು ರಾಜ್ಯಕ್ಕೆ 12 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುವಂತೆ ಸೂಚನೆ ನೀಡಿತ್ತು.

ಆ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ರಾಜ್ಯ ಸರ್ಕಾರ ಸುಪ್ರೀಂ ಬಳಿ ಆದೇಶ ಮಾರ್ಪಾಡು ಮಾಡುವಂತೆ ಕೋರಿ ತುರ್ತು ಅರ್ಜಿಯೊಂದನ್ನು ಸಲ್ಲಿಸಿತ್ತು. ಸೆ.20 ಬದಲು ಸೆ.16 ರವರೆಗೂ ನೀರು ಬಿಡುಗಡೆ ಮಾಡುವಂತೆ ಆದೇಶ ಮಾರ್ಪಾಡು ಮಾಡುವಂತೆ ಮನವಿ ಸಲ್ಲಿಸಿತ್ತು. ಈ ಅರ್ಜಿಯನ್ನೂ ಸುಪ್ರೀಂಕೋರ್ಟ್ ಇದೀಗ ತಿರಸ್ಕರಿಸಿದ್ದು, ಸೆ.20 ರವರೆಗೂ 12 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುವಂತೆ ರಾಜ್ಯಕ್ಕೆ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com