ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ಹೆಸರಿನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದವರ ವಿರುದ್ಧ ಕಾನೂನು ಚೌಕಟ್ಟಿನಡಿಯಲ್ಲಿ ತನ್ನದೇ ಆದ ಕ್ರಮ ಸರ್ಕಾರ ಕೈಗೊಳ್ಳಲಿದೆ. ಹಾಗಾಗಿ ಯಾರೂ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತಂದು ಕಾನೂನನ್ನು ಕೈಗೆತ್ತಿಕೊಳ್ಳಲು ಪ್ರಯತ್ನಿಸಬೇಡಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.