ಬೆಂಗಳೂರು: ಬೆಂಗಳೂರಿನಲ್ಲಿ ಕರ್ಫ್ಯೂ ನಡುವೆಯೇ ಮುಸ್ಲಿಮ್ ಬಾಂಧವರ ಪವಿತ್ರ ಹಬ್ಬ ಬಕ್ರೀದ್ ಆಚರಣೆ ನಡೆದಿದೆ.
ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ, ಬಕ್ರಿದ್ ಅಂಗವಾಗಿ ಪ್ರಾರ್ಥನೆ ಸಲ್ಲಿಸಲು ಅನುಕೂಲವಾಗುವಂತೆ ಮೈಸೂರು ರಸ್ತೆಯಲ್ಲಿ ಬೆಳಿಗ್ಗೆ ಒಂದು ಗಂಟೆಯ ಕಾಲ ಕರ್ಫ್ಯೂ ಸಡಿಲಗೊಳಿಸಲಾಗಿತ್ತು. ಮೈಸೂರು ರಸ್ತೆ ಫ್ಲೈ ಓವರ್ ಬಳಿ ಇರುವ ಎರಡು ಮಸೀದಿಗಳಲ್ಲೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಬಕ್ರಿದ್ ಆಚರಣೆ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗೃತಾ ಕ್ರಮ ಕೈಗೊಂಡಿದ್ದರು. ನಿಷೇಧಾಜ್ಞೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಎರಡೂ ಮಸೀದಿಗಳಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ನು ಮೈಸೂರು ರಸ್ತೆ ಭಾಗದಲ್ಲಿ ಕರ್ಫ್ಯೂ ಇರುವುದರ ಬಗ್ಗೆ ಜನರಿಗೆ ತಿಳಿಸಲು ಹಾಗೂ ಗಲಭೆಯನ್ನು ನಿಯಂತ್ರಿಸಲು ಸಿಆರ್ ಪಿಎಫ್ ತುಕಡಿ ಸಿಬ್ಬಂದಿಗಳು ಫ್ಲಾಗ್ ಮಾರ್ಚ್ ನಡೆಸಲಾಗಿದೆಮಾರ್ಚ್ ನಡೆಸಿದ್ದಾರೆ.