ಕಾವೇರಿಗಾಗಿ ಪ್ರತಿಭಟನೆ: ಕಾನೂನು ಸುವ್ಯವಸ್ಥೆ ಬಗ್ಗೆ ಸಿದ್ದರಾಮಯ್ಯರಿಂದ 'ಕೈ' ಹೈಕಮಾಂಡ್ ಗೆ ಮಾಹಿತಿ

ಕಾವೇರಿ ವಿವಾದದ ವಿಷಯವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಕಳೆದ ಒಂದು ದಿನದಿಂದ ನಡೆದಿರುವ ಬೆಳವಣಿಗೆಗಳು ಹಾಗೂ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು: ಕಾವೇರಿ ವಿವಾದದ ವಿಷಯವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಕಳೆದ ಒಂದು ದಿನದಿಂದ ನಡೆದಿರುವ ಬೆಳವಣಿಗೆಗಳು ಹಾಗೂ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ. 
ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ರಾಜ್ಯದ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. 
ಹೈಕಮಾಂಡ್ ಗೆ ರಾಜ್ಯದ ಪರಿಸ್ಥಿತಿ ಕುರಿತು ವಿವರಣೆ ನೀಡಿರುವ ಸಿಎಂ ಸಿದ್ದರಾಮಯ್ಯ, ಕಾವೇರಿ ವಿಚಾರವಾಗಿ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆಯೇ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೇಳಲು ಪ್ರಮುಖ ಕಾರಣವೆಂದು ತಿಳಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. 
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ:
ಇನ್ನು ಕಾವೇರಿ ವಿಚಾರವಾಗಿ ರಾಜ್ಯದ ಮುಂದಿನ ನಡೆ ಕುರಿತು ತೀರ್ಮಾನಿಸಲು ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೋಯ್ಲಿ, ಮಾಜಿ ಸಿಎಂ ಧರ್ಮ ಸಿಂಗ್, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್, ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್, ಮಾರ್ಗರೇಟ್ ಆಳ್ವಾ, ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್, ಗೃಹ ಸಚಿವ ಪರಮೇಶ್ವರ್, ರಾಜ್ಯ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್, ಅಡ್ವೊಕೇಟ್ ಜನರಲ್ ಮಧುಸೂಧನ್ ನಾಯಕ್ ಭಾಗಿಯಾಗಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com