

ಬೆಂಗಳೂರು; ಕಾವೇರಿ ಗಲಾಟೆ ಹಿನ್ನೆಲೆಯಲ್ಲಿ ನಗರದ ಹಲವೆಡೆ ಕರ್ಫ್ಯೂ ಹಾಗೂ ನಿಷೇದಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಅನುದಾನ ರಹಿತ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅನುದಾನ ರಹಿತ ಶಾಲಾ ಕಾಲೇಜುಗಳ ಒಕ್ಕೂಟದ ಕಾರ್ಯದರ್ಶಿ ಕುಮಾರ್ ಈ ವಿಷಯವನ್ನು ಸ್ಪಷ್ಟ ಪಡಿಸಿದ್ದಾರೆ. ಕಾವೇರಿ ಗಲಭೆ ಹಿನ್ನೆಲೆಯಲ್ಲಿ ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗಬಾರದು ಎಂಬ ಹಿತ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ನಿನ್ನೆ ಸಂಭವಿಸಿದ ಗಲಭೆಯಿಂದಾಗಿ ಬೆಂಗಳೂರಿನಲ್ಲಿ ಇನ್ನೂ ನಿಷೇದಾಜ್ಞೆ ಮುಂದುವರಿದಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ, ಬೆಂಗಳೂರಿನ ಕೆಲವೆಡೆ ಇಂದು ಪ್ರತಿಭಟನೆ ಮುಂದುವರಿದಿದೆ. ಆದರೆ ಕೆಲ ಪ್ರದೇಶಗಳಲ್ಲಿ ಜನ ಜೀವನ ಸಹಜ ಸ್ಥಿತಿಗೆ ಬರುತ್ತಿದೆ.