ಬೆಂಗಳೂರು: ಕಾವೇರಿ ನೀರು ಬಿಡುಗಡೆ ಸಂಬಂಧ ಗಲಭೆ, ಹಿಂಸಾಚಾರಗಳು ಬೆಂಗಳೂರು ಸೇರಿದಂತೆ, ಮಂಡ್ಯ, ಮೈಸೂರು ಇತ್ಯಾದಿ ಭಾಗಗಳಲ್ಲಿ ಭುಗಿಲೇಳುತ್ತಿರುವ ಸಂದರ್ಭದಲ್ಲಿ ಜನತೆ ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ.
ಸಾರ್ವಜನಿಕರಿಗೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡದಂತೆ ಎಷ್ಟೇ ಮನವಿ ಮಾಡಿಕೊಂಡರೂ ಕೂಡ ಸರ್ಕಾರದ ಎಚ್ಚರಿಕೆ ಉಲ್ಲಂಘಿಸಿ ಕಿಡಿಗೇಡಿ ಕೃತ್ಯ ನಡೆಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ತಮಿಳುನಾಡಿನಲ್ಲಿರುವ ಕನ್ನಡಿಗರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.