

ಬೆಂಗಳೂರು: ಕಾವೇರಿ ನೀರು ವಿವಾದ ಸಂಬಂಧ ನಡೆಸಿದ ತುರ್ತು ಸಚಿವ ಸಂಪುಟ ಸಭೆ ನಂತರ ಗಲಭೆ ಪೀಡಿತ ಪ್ರದೇಶಗಳಿಗೆ ಪರಿಶೀಲನೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ರಾಜ್ಯದಲ್ಲಿ ತಲೆದೋರಿರುವ ಪರಿಸ್ಥಿತಿಯ ಬಗ್ಗೆ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲು ತುರ್ತು ಸಭೆ ನಡೆಸಿದ್ದಾರೆ. ಸದ್ಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆಯಲ್ಲಿ ತೊಡಗಿರುವ ಸಿಎಂ ಸಭೆ ಮುಗಿದ ಬಳಿಕ ಗಲಭೆ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ನಿನ್ನೆ ನಗರದ ಮೈಸೂರು ರಸ್ತೆ, ಮಾಗಡಿ ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಲಭೆ ನಡೆದಿತ್ತು. ಇನ್ನೂ ಪೊಲೀಸರ ಗೋಲಿ ಬಾರ್ ನಿಂದ ವ್ಯಕ್ತಿಯೊಬ್ಬ ಮೃತ ಪಟ್ಟ ಹೆಗ್ಗನ ಹಳ್ಳಿಗೂ ಕೂಡ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಇಂದು ಮುಂಜಾನೆ ಸಿಎಂ ನಿವಾಸ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಹಿರಿಯ ನಾಯಕರು, ಸಚಿವರು ಹಾಗೂ ಕೆಲ ಸಂಸದರು ಸಭೆಯಲ್ಲಿ ಪಾಲ್ಗೋಂಡಿದ್ದರು.