ಕಾವೇರಿ ನೀರಿನ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ, ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕರೊಂದಿಗೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕಾವೇರಿ ವಿಷಯವಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಆರೋಪಿಸಿದ್ದು ಒಕ್ಕೂಟ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿಗಳಿಗೆ ಬೆಲೆ ಇಲ್ಲವಾ ಎಂದು ಸಿಎಂ ಪ್ರಶ್ನಿಸಿದ್ದಾರೆ.