ಬೆಂಗಳೂರಿನಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಶಸ್ತ್ರಚಿಕಿತ್ಸೆ

ದೀರ್ಘಕಾಲದ ಕೆಮ್ಮಿನಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನಗರದ ನಾರಾಯಣ ಹೆಲ್ತ್ ಕೇರ್ ಸಿಟಿಯಲ್ಲಿ ಗಂಟಲು ಹಾಗೂ ಮೂಗಿನ ..
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on

ಬೆಂಗಳೂರು: ದೀರ್ಘಕಾಲದ ಕೆಮ್ಮಿನಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನಗರದ ನಾರಾಯಣ ಹೆಲ್ತ್ ಕೇರ್ ಸಿಟಿಯಲ್ಲಿ ಗಂಟಲು ಹಾಗೂ ಮೂಗಿನ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ಮಜುಮ್ದಾರ್ ಶಾ ಮೆಡಿಕಲ್ ಸೆಂಟರ್ ನ ವೈದ್ಯಕೀಯ ನಿರ್ದೇಶಕ ಡಾ.ಪಾಲ್ ಸ್ಯಾಲಿನ್ ನೇತೃತ್ವದ ತಂಡ ಬೆಳಗ್ಗೆ ಯಿಂದ ಮಧ್ಯಾಹ್ನ ಮೂರು ಗಂಟೆವರೆಗೂ ಶಸ್ತ್ರ ಚಿಕಿತ್ಸೆ ನಡೆೆಸಿತು.

ಅರವಿಂದ್ ಕೇಜ್ರಿವಾಲ್ ಕಳೆದ 40 ವರ್ಷಗಳಿಂದ ಕೆಮ್ಮಿನಿಂದ ಬಳಲುತ್ತಿದ್ದರು. ಅವರ ಕಿರುನಾಲಗೆಯಲ್ಲಿ ಉಂಟಾಗಿದ್ದ ಸಮಸ್ಯೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಸರಿ ಪಡಿಸಲಾಗಿದೆ.

ಶಸ್ತ್ರ ಚಿಕಿತ್ಸೆ ಬಳಿಕ ಕೇಜ್ರಿವಾಲ್ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಅವರು ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com