ಕಾವೇರಿ ವಿವಾದ: ಕೇಂದ್ರ ತಜ್ಞರು ರಾಜ್ಯಗಳಿಗೆ ಭೇಟಿ ನೀಡುವುದೇ ಸರಿ- ಕಾನೂನು ತಜ್ಞರು

ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳಿಗೆ ಕೇಂದ್ರದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುವುದೇ ಉತ್ತಮವಾಗಿರುತ್ತದೆ...
ಕಾನೂನು ತಜ್ಞರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸುತ್ತಿರುವುದು
ಕಾನೂನು ತಜ್ಞರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸುತ್ತಿರುವುದು

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳಿಗೆ ಕೇಂದ್ರದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುವುದೇ ಉತ್ತಮವಾಗಿರುತ್ತದೆ ಎಂದು ಕಾನೂನು ತಜ್ಞರು ಗುರುವಾರ ಸಲಹೆ ನೀಡಿದ್ದಾರೆ.

ಕಾವೇರಿ ನದಿ ನೀರಿ ಹಂಚಿಕೆಯಿಂದಾಗಿ ರಾಜ್ಯದಲ್ಲಿ ಎದುರಾಗಲಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಿರಿಯ ಕಾನೂನು ತಜ್ಞರು, ನಿವೃತ್ತ ನ್ಯಾಯಾಧೀಶಕರು, ಮತ್ತು ವಕೀಲರೊಂದಿಗೆ ನಿನ್ನೆ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದ್ದಾರೆ.

ಕಾವೇರಿ ವಿವಾದ ಕುರಿತಂತೆ ಸೆ.20 ರಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ ಕಾನೂನು ತಜ್ಞರ ಸಲಹೆಯನ್ನು ಪಡೆದುಕೊಂಡಿದ್ದಾರೆ.

ಸಭೆ ವೇಳೆ ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳಿಗೂ ಕೇಂದ್ರದ ನೇತೃತ್ವದಲ್ಲಿ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುವುದೇ ಸಮಸ್ಯೆಗೆ ಉತ್ತಮವಾದ ಪರಿಹಾರವಾಗಿದೆ ಎಂದು ಸಾಕಷ್ಟು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ವಿಚಾರಣೆ ವೇಳೆ ಕರ್ನಾಟಕದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನೂ ರಾಜ್ಯದ ಪರ ವಕೀಲರು ಹೈಲೈಟ್ ಮಾಡಬೇಕಿದೆ. ಬರ ಪರಿಸ್ಥಿತಿ ಎದುರಿಸುತ್ತಿರುವ ಸ್ಥಾನದಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂಬುದನ್ನು ವಿವರಿಸಬೇಕಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರತೀ ವರ್ಷ ಜೂನ್-ಸೆಪ್ಟೆಂಬರ್ ವರೆಗೆ ಅತ್ಯಂತ ಕಡಿಮೆ ಮಟ್ಟದಲ್ಲಿ ಮಳೆಯಾಗುತ್ತದೆ. ಆದರೆ, ಅಕ್ಟೋಬರ್-ಜನವರಿಯಲ್ಲಿ ಈಶಾನ್ಯ ಮಾನ್ಸೂನ್ ಇರುವುದರಿಂದ ತಮಿಳುನಾಡಿನಲ್ಲಿ ಸಾಕಷ್ಟು ಮಳೆಯಾಗುತ್ತದೆ.

ಕಾವೇರಿಯಿಂದ ಪ್ರತಿನಿತ್ಯ ನೀರನ್ನು ಬಿಡುಗಡೆ ಮಾಡುತ್ತಿದ್ದರೆ, ನೀರು ತಳಮಟ್ಟಕ್ಕೆ ಇಳಿಯಲಿದೆ. ಕಾವೇರಿಯನ್ನೇ ನಂಬಿ ಜೀವನ ನಡೆಸುತ್ತಿರುವ ರೈತರಿಗೆ ಇದರಿಂದ ಭಾರೀ ಹೊಡೆತ ಬೀಳಲಿದೆ. ಕೇವಲ ತಳಮಟ್ಟದ ನೀರು ಇಡೀ ರಾಜ್ಯಕ್ಕೆ ಪೂರೈಕೆ ಮಾಡಲು ಸಾಧ್ಯವಿಲ್ಲ. ಮೆಟ್ಟೂರು ಹಾಗೂ ಕಾವೇರಿಯಲ್ಲಿರುವ ವಾಸ್ತವಿಕತೆಯನ್ನು ಸುಪ್ರೀಂಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ. ಸುಪ್ರೀಂನಲ್ಲಿ ವಿಚಾರಣೆ ನಡೆಯುವುದಕ್ಕೂ ಮುನ್ನ ತಜ್ಞರ ತಂಡ ಎರಡೂ ರಾಜ್ಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಕಾವೇರಿ ಮೇಲ್ವಿಚಾರಣಾ ಸಮಿತಿಗೆ ಮನವರಿಕೆ ಮಾಡುವ ಅಗತ್ಯವಿದೆ ಎಂದು ತಜ್ಞರು ಸಭೆಯಲ್ಲಿ ಹೇಳಿದ್ದಾರೆ.

ಸಭೆಯಲ್ಲಿ ಭಾರತದ ನಿವೃತ್ತ ಮುಖ್ಯ ನ್ಯಾಯಾಧೀಶ ಎಸ್. ರಾಜೇಂದ್ರ ಬಾಬು, ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ರಾಮ ಜೋಯಿಸ್, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಎ.ಎಶ್. ಸದಾಶಿವ, ಪಿ. ವಿಶ್ವನಾಥ್ ಶೆಟ್ಟಿ, ಎನ್. ಕುಮಾರ್, ರಾಜ್ಯ ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್, ಹಿರಿಯ ವಕೀಲ ಬಿ.ವಿ. ಆಚಾರ್ಯ, ರವಿ ವರ್ಮ ಕುಮಾರ್, ಕಾವೇರಿ ವಿವಾದ ಸಂಬಂಧ ಕರ್ನಾಟಕದ ಪರ ವಕೀಲ ಮೋಹನ್ ಕಟರ್ಕಿ ಮತ್ತು ಇನ್ನಿತರರು ಹಾಜರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com