

ಕೋಲಾರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೀಡಿದ್ದ ಬಿಸಿಯೂಟ ತಿಂದು 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಶ್ರೀನಿವಾಸಪುರ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ.
ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ 79ಕ್ಕೂ ಹೆಚ್ಚು ಮಕ್ಕಳಿಗೆ ಅನ್ನ ಮತ್ತು ಸಾಂಬಾರನ್ನು ನೀಡಲಾಗಿದೆ. ಊಟ ಮಾಡಿದ ಕಲವೇ ನಿಮಿಷಗಳಲ್ಲಿ 25 ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ವಾಂತಿ ಮಾಡಲು ಆರಂಭಿಸಿದ್ದಾರೆ. ಅಲ್ಲದೆ, ಹೊಟ್ಟೆ ನೋವು ಎಂದು ಹೇಳಿದ್ದಾರೆ. ಕೂಡಲೇ ಎಲ್ಲಾ ಮಕ್ಕಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮಕ್ಕಳಿಗೆ ನೀಡಲಾದ ಆಹಾರವನ್ನು ಇದೀಗ ಬೆಂಗಳೂರಿನಲ್ಲಿರುವ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಕೋಲಾಕ ಉಪ ಆಯುಕ್ತ ಕೆ.ವಿ. ಥ್ರಿಲೋಕ್ ಚಂದ್ರ ಅವರು ಹೇಳಿದ್ದಾರೆ.
ಇನ್ನು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು ಎರಡು ದಿನಗಳೊಳಗಾಗಿ ಘಟನೆ ಕುರಿತಂತೆ ಸಂಪೂರ್ಣ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.