ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಬೇಳೆ-ಕಾಳು ಭಾಗ್ಯ: ಖಾದರ್

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಇನ್ನು ಮುಂದೆ ಬೇಳೆ-ಕಾಳುಗಳನ್ನು ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ.ಖಾದರ್...
ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ.ಖಾದರ್ (ಸಂಗ್ರಹ ಚಿತ್ರ)
ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ.ಖಾದರ್ (ಸಂಗ್ರಹ ಚಿತ್ರ)

ಮಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಇನ್ನು ಮುಂದೆ ಬೇಳೆ-ಕಾಳುಗಳನ್ನು ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ.ಖಾದರ್ ಅವರು ಶುಕ್ರವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರವ ಅವರು, ಬಿಪಿಎಲ್ ಕಾರ್ಡ್ ಹೊಂದಿರುವ ಜನರಿಗೆ ತೊಗರಿಬೇಳೆ ಮತ್ತು ಇನ್ನಿತರೆ ಬೇಳೆ-ಕಾಳುಗಳನ್ನು ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲಿಯೇ ಬಿಪಿಎಲ್ ಚೀಟಿ ಹೊಂದಿರುವ ಫಲಾನುಭವಿಗಳು ಬೇಳೆ-ಕಾಳುಗಳ ಭಾಗ್ಯವನ್ನು ಪಡೆಯಲಿದ್ದಾರೆಂದು ಹೇಳಿದ್ದಾರೆ.

ಆಧಾರ್ ಕಾರ್ಡ್ ಗಳ ಸಂಖ್ಯೆಯನ್ನು ಜೋಡಣೆ ಮಾಡುತ್ತಿರುವುದರಿಂದ 7.5 ಲಕ್ಷ ನಕಲಿ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ವರದಿಯಂತೆ ಗ್ರಾಹಕರಿಗೆ ಸರ್ಕಾರ ತೆಂಗಿನಕಾಯಿ, ಸೂರ್ಯಕಾಂತಿ ಮತ್ತು ತಾಳೆ ಎಣ್ಣೆಯ ಶೀಘ್ರದಲ್ಲಿಯೇ ವಿತರಣೆ ಮಾಡಲಿದೆ.

ಕೂಪನ್ ವ್ಯವಸ್ಥೆಯನ್ನು ಅಳವಡಿಸಿರುವುದರಿಂದ ಸಾಕಷ್ಟು ಪಡಿತರ ಚೀಟಿಗಳಿಗೆ ವಾರಸುದಾರರೇ ಇಲ್ಲದಿರುವುದು ಕಂಡುಬಂದಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಕರ್ನಾಟಕದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲವನ್ನು ಕಾರ್ಯಗತಗೊಳಿಸುವ ಕುರಿತಂತೆ ಶೀಘ್ರದಲ್ಲಿಯೇ ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುತ್ತದೆ.

ಈ ಯೋಜನೆಯನ್ನು ಜಾರಿಗೆ ತಂದಿದ್ದೇ ಆದರೆ, ಬಿಪಿಎಲ್ ಪಿಡಿತರ ಚೀಟಿ ಹೊಂದಿರುವವರಿಗೆ ಎಲ್ ಪಿಜಿ ಸಂಪರ್ಕವನ್ನು ಕಲ್ಪಿಸಬಹುದಾಗಿದೆ. ಯೋಜನೆ ಜಾರಿಗೊಳ್ಳುವ ನಿರೀಕ್ಷೆ ಹಿನ್ನೆಲೆಯಲ್ಲಿ ಕೆಲ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಎಲ್ ಪಿಜಿ ಸಿಲಿಂಡರ್ ಗಳನ್ನು ಈಗಾಗಲೇ ನೀಡಲಾಗಿದೆ. 2011ರ ಸಾಮಾಜಿ-ಆರ್ಥಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿರುವ ಆರ್ಥಿಕವಾಗಿ ಹಿಂದುಳಿದ ಜನರನ್ನು ಇದರಲ್ಲಿ ಸೇರ್ಪಡೆಗೊಳಿಸುವಂತೆ ಕೇಂದ್ರ ಬಳಿ ಆಗ್ರಹಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com