ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ನವನೀತ್ ಶೆಟ್ಟಿ ಸಿಐಡಿ ವಶಕ್ಕೆ

ಹೋಟೆಲ್ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ನಿರಂಜನ ಭಟ್‌ ಅವರನ್ನು ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾ ಲಯ ಇದೇ 21ರ ...
ನವನೀತ್ ಶೆಟ್ಟಿ
ನವನೀತ್ ಶೆಟ್ಟಿ
Updated on

ಉಡುಪಿ: ಹೋಟೆಲ್  ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ನಿರಂಜನ ಭಟ್‌ ಅವರನ್ನು ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾ ಲಯ ಇದೇ 21ರ ವರೆಗೆ ಸಿಐಡಿ ಪೊಲೀಸರ ವಶಕ್ಕೆ ನೀಡಿದೆ.

ಪ್ರಕರಣದ ಇನ್ನೊಬ್ಬ ಆರೋಪಿ ರಾಜೇಶ್ವರಿ ಶೆಟ್ಟಿ ಹಾಗೂ ಸಾಕ್ಷ್ಯ ನಾಶ ಪ್ರಕರಣದ ಆರೋಪಿಗಳಾದ ಶ್ರೀನಿವಾಸ ಭಟ್ ಹಾಗೂ ರಾಘವೇಂದ್ರ ಅವರನ್ನು ಅ.3ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕೊಲೆಗೆ ಬಳಸಿದ ಕಬ್ಬಿಣದ ಸಲಾಕೆ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆಗೆ ನವನೀತ್‌ ಶೆಟ್ಟಿಯನ್ನು 6 ದಿನಗಳ ಕಾಲ ವಶಕ್ಕೆ ನೀಡಬೇಕು ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com