

ಮಂಡ್ಯ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಮಂಡ್ಯದಲ್ಲಿ ಪ್ರತಿಭಟನೆಗಳು ಮುಂದುವರಿದಿವೆ. ಸುಪ್ರೀಂಕೋರ್ಟ್ ನಂತರ ಕಾವೇರಿ ಮೇಲುಸ್ತುವಾರಿ ಸಮಿತಿ ಕೂಡ ತಮಿಳುನಾಡಿಗೆ ನೀಡುವ ಬಿಡುವಂತೆ ರಾಜ್ಯಕ್ಕೆ ಸೂಚಿಸಿರುವುದರಿಂದ ರೈತರು ಮತ್ತಷ್ಟು ಆಕ್ರೋಶ ಗೊಂಡಿದ್ದಾರೆ.
ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಇಂದು ಮಂಡ್ಯದಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. ಮಣ್ಣು ತಿನ್ನುವ ಮೂಲಕ ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿದ ಪ್ರತಿಭಟನಾಕಾರರು ಚಪ್ಪಲಿಗಳನ್ನು ತಮ್ಮ ತಲೆಯ ಮೇಲೆ ಇಟ್ಟುಕೊಳ್ಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭದ್ರತೆ ದೃಷ್ಠಿಯಿಂದ ಮಂಡ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, 144ನೇ ಸೆಕ್ಷನ್ ಜಾರಿ ಮಾಡಲಾಗಿದೆ. ಇನ್ನೂ ಇಂದು ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ನೀಡುವ ಹಿನ್ನೆಲೆಯಲ್ಲಿ ಕೆಲ ಪ್ರತಿಭಟನಾಕಾರರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು.
ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿ, ಶಾಂತಿ ಕಾಪಾಡುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.