ಕಾವೇರಿ ನೀರು ವಿವಾದ: ವಾಟಾಳ್ ನಾಗರಾಜ್ ವಶಕ್ಕೆ ಪಡೆದ ಪೊಲೀಸರು

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಲು ಮುಂದಾದ ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ನಗರ ಪೊಲೀಸರು ಬುಧವಾರ...
ವಾಟಾಳ್ ನಾಗರಾಜ್ (ಸಂಗ್ರಹ ಚಿತ್ರ)
ವಾಟಾಳ್ ನಾಗರಾಜ್ (ಸಂಗ್ರಹ ಚಿತ್ರ)
Updated on: 

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಲು ಮುಂದಾದ ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ನಗರ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.

ಕಾವೇರಿ ವಿವಾದ ಕುರಿತಂತೆ ನಿನ್ನೆಯಷ್ಟೇ ಮತ್ತೆ ಆದೇಶ ನೀಡಿದ್ದ ಸುಪ್ರೀಂಕೋರ್ಟ್, ಮತ್ತೆ 6 ಸಾವಿರ ಕ್ಯೂಸೆಕ್ಸ್ ನೀರನ್ನು ಸೆ.26ರವರೆಗೂ ಪ್ರತೀನಿತ್ಯ ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಸೂಚನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ಸುಪ್ರೀಂ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ವಾಟಾಳ್ ನಾಗರಾಜ್ ಅವರು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸು ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಕೆಪಿಎಸ್ ಸಿ ಕಚೇರಿ ಬಳಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಕಾರು ವಶಕ್ಕೆ ಪಡೆದಿದ್ದಕ್ಕೆ ವಾಟಾಳ್ ಆಕ್ರೋಶ
ತಮ್ಮ ಕಾರಿನಲ್ಲೇ ಪೊಲೀಸರು ಠಾಣೆಗೆ ಕರೆದೊಯ್ದು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಕ್ಕೆ ವಾಟಾಳ್ ನಾಗರಾಜ್ ಅವರು ಆಕ್ರೋಶವ್ಯಕ್ತಪಡಿಸಿದ್ದು, ಪೊಲೀಸರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ ನಡೆಸಿದ್ದಾರೆ.

ಈ ಕುರಿತಂತೆ ಶೇಷಾದ್ರಿ ಪೊಲೀಸ್ ಠಾಣೆಯ ಹೊರಭಾಗದಲ್ಲಿ ಹೇಳಿಕೆ ನೀಡಿರುವ ಅವರು, ವಿಧಾನಸೌಧದ ಎದುರು ನಾನು ಪ್ರತಿಭಟನೆಯೊಂದರಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದೆ. ಕೆಪಿಎಸ್ ಸಿ ಕಚೇರಿಯ ಮುಂಭಾಗದಲ್ಲಿ ನನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನನ್ನ ಕಾಲಿನಲ್ಲೇ ಕುಳಿತ ಪೊಲೀಸರು ಅವರೇ ಕಾರನ್ನು ಚಾಲನೆ ಮಾಡಿ ಶೇಷಾದ್ರಿ ಪೊಲೀಸ್ ಠಾಣೆಗೆ ಕರೆತಂದರು.

ಇದೀಗ ಪೊಲೀಸರು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನನ್ನು ವಶಕ್ಕೆ ಪಡೆಯುವ ಹಕ್ಕು ಪೊಲೀಸರಿಗೆ ಇದೆ, ಆದರೆ, ನನ್ನ ಕಾರನ್ನು ವಶಕ್ಕೆ ಪಡೆಯುವ ಹಕ್ಕು ಅವರಿಗಿಲ್ಲ. ಈ ಬಗ್ಗೆ ಪೊಲೀಸರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ ನಡೆಸಲಾಗುತ್ತಿದ್ದು, ವಕೀಲರೊಂದಿಗೆ ಶೀಘ್ರದಲ್ಲೇ ಮಾತುಕತೆ ನಡೆಸಲಿದ್ದೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com