ಕಾವೇರಿ ವಿವಾದ; ಸುಪ್ರೀಂ ಆದೇಶ ಕಾರ್ಯರೂಪಕ್ಕೆ ತರುವುದು ಅಸಾಧ್ಯ- ಸಿದ್ದರಾಮಯ್ಯ

ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಸುಪ್ರೀಂ ನೀಡಿರುವ ಆದೇಶವನ್ನು ಕಾರ್ಯರೂಪಕ್ಕೆ ತರುವುದು ಅಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on: 

ಬೆಂಗಳೂರು: ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಸುಪ್ರೀಂ ನೀಡಿರುವ ಆದೇಶವನ್ನು ಕಾರ್ಯರೂಪಕ್ಕೆ ತರುವುದು ಅಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಾವೇರಿ ನೀರು ವಿವಾದ ಕುರಿತಂತೆ ನಿನ್ನೆಯಷ್ಟೇ ಆದೇಶ ನೀಡಿದ್ದ ಸುಪ್ರೀಂಕೋರ್ಟ್ ಸೆ.27ರ ವರೆಗೆ ಪ್ರತೀನಿತ್ಯ 6 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸೂಚನೆ ನೀಡಿತ್ತು.

ಆದೇಶ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ತಮಿಳುನಾಡಿಗೆ ಸೆ.27 ರವರೆಗೆ 6 ಸಾವಿರ ಕ್ಯೂಸೆಕ್ಸ್ ನೀರನ್ನು ಪ್ರತೀನಿತ್ಯ ಹರಿಸುವಂತೆ ಸುಪ್ರೀಂ ಆದೇಶಿಸಿದೆ. ನಮ್ಮ ರಾಜ್ಯಕ್ಕೆ ನೀರಿಲ್ಲ. ಈ ಪರಿಸ್ಥಿತಿಯಲ್ಲಿ ಸುಪ್ರೀಂ ಆದೇಶವನ್ನು ಕಾರ್ಯರೂಪಕ್ಕೆ ತರುವುದು ಅಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ಕಾವೇರಿ ನದಿಯಲ್ಲಿರುವ ವಾಸ್ತವಿಕ ಸ್ಥಿತಿಯನ್ನು ಕಾವೇರಿ ಮೇಲ್ವಿಚಾರಣ ಸಮಿತಿಯ ಬಳಿ ಸಲ್ಲಿಸಲಾಗಿದೆ. ಎಲ್ಲಾ ಸತ್ಯಾಸತ್ಯತೆ ತಿಳಿದಿದ್ದರೂ ಸುಪ್ರೀಂ ಪ್ರತೀನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸೂಚಿಸಿದೆ. ರಾಜ್ಯದ ಜನತೆ ಹಾಗೂ ರೈತರ ಹಿತಾಸಕ್ತಿಗಳನ್ನು ಕಾಪಾಡಲು ನಾವು ಬದ್ಧರಾಗಿದ್ದೇವೆ.

ಆದೇಶ ಕುರಿತಂತೆ ಇಂದು ಸಂಪುಟ ಸಭೆಯನ್ನು ನಡೆಸಲಾಗುತ್ತಿದ್ದು, ಈ ಬಗ್ಗೆ ಚರ್ಚೆ ನಡೆಸುತ್ತೇವೆ. ಸುಪ್ರೀಂಕೋರ್ಟ್ ನೀಡಿದ್ದ ಆದೇಶದ ಪ್ರತಿಗಾಗಿ ಕಾಯುತ್ತಿದ್ದು, ಆದೇಶವನ್ನು ಸಭೆಯಲ್ಲಿ ಪರಿಶೀಲಿಸಲಾಗುತ್ತದೆ. ಕಾನೂನು ತಜ್ಞರನ್ನೂ ಸಂಪರ್ಕಿಸಲಾಗುತ್ತದೆ. ಇದರ ಜೊತೆಜೊತೆಗೇ ಸರ್ವ ಪಕ್ಷ ಸಭೆಯನ್ನೂ ಕರೆಯಲಾಗಿದೆ. ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಎಲ್ಲಾ ನಾಯಕರು ಹಾಗೂ ಎಲ್ಲಾ ಪಕ್ಷದ ಪ್ರತಿಕ್ರಿಯೆಗಳನ್ನು ತೆಗೆದುಕೊಂಡು ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com