ಕಲಬುರಗಿ: ಕಲಬುರಗಿ ಜಿಲ್ಲೆಯ ಮೈನಾಳ ಗ್ರಾಮದ ಭೀಮಾ ನದಿ ದಂಡೆಯಲ್ಲಿ ಸುಮಾರು ಅರ್ಧ ಕಿ.ಮೀ.ವರೆಗೆ ಭೂಮಿ ಬಿರುಕುಬಿಟ್ಟಿದ್ದು, ಗ್ರಾಮದ ಜನತೆಯಲ್ಲಿ ಆತಂಕ ಸೃಷ್ಟಿಸಿದೆ.
ಭೀಮಾ ನದಿ ದಂಡೆಯಲ್ಲಿ ಸುಮಾರು ಅರ್ಧ ಕಿ.ಮೀ. ವರೆಗೆ 4ರಿಂದ 5 ಅಡಿ ಆಳದವರೆಗೆ ಭೂಮಿ ಬಿರುಕು ಬಿಟ್ಟಿದ್ದು, ಭಾರಿ ಮಳೆಯಿಂದಾಗಿ ಭೂ ಕುಸಿತವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಕಲಬುರ್ಗಿಯ ಭೂವಿಜ್ಞಾನಿ ಎಂ.ಎ.ಖಾನ್ ಅವರು ಭೂಕಂಪದಿಂದಾಗಿ ಭೂಮಿ ಬಿರುಕು ಬಿಟ್ಟಿಲ್ಲ. ಭಾರಿ ಮಳೆಯಿಂದ ಭೂಕುಸಿತವಾಗಿವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಕಳೆದ ಎರಡು ದಿನಗಳಿಂದ ಹೈದರಾಬಾದ್ ಕರ್ನಾಕದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಕಲಬುರ್ಗಿ ಹಾಗೂ ಬೀದರ್‌ನಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಪ್ರವಾಹದಲ್ಲಿ ಸಿಲುಕಿದ್ದ ಆರು ರೈತರನ್ನು ರಕ್ಷಿಸಲಾಗಿದೆ.