

ಬೆಂಗಳೂರು: ಆಂಧ್ರ ಪ್ರದೇಶ ಹಾಗೂ ಒಡಿಶಾ ಕಡಲ ತೀರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜಧಾನಿ ಬೆಂಗಳೂರಿನ ಮೇಲೂ ಆಗಿದ್ದು, ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಜಡಿ ಮಳೆ ಆರಂಭವಾಗಿದೆ.
ಕಳೆದ ರಾತ್ರಿ ಕೂಡ ಬೆಂಗಳೂರಿನಾದ್ಯಂತ ಜಿಟಿ ಜಿಟಿ ಮಳೆ ಆರಂಭವಾಗಿದ್ದು, ಛತ್ರಿ ಮತ್ತು ರೈನ್ ಕೋಟ್ ಗಳನ್ನು ಧರಿಸಿಯೇ ಜನರು ಕಚೇರಿಗೆ ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಬೆಂಗಳೂರಿನಲ್ಲಿ ಇನ್ನೂ 3 ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಮೂರು ದಿನಗಳ ಕಾಲ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕಿ ಗೀತಾ ಅಗ್ನಿ ಹೋತ್ರಿ ತಿಳಿಸಿದ್ದಾರೆ.
ಬೆಂಗಳೂರಿನ ಉಷ್ಣಾಂಶ ಕೂಡ ಕನಿಷ್ಟ ಮಟ್ಟಕ್ಕೆ ಕುಸಿದಿದ್ದು, ಬೆಳಗ್ಗೆ 9 ಗಂಟೆ ವೇಳೆಗೆ 23 ಡಿಗ್ರಿ ಉಷ್ಣಾಂಶ ದಾಖಲಾಗಿದೆ.