
ಬೆಂಗಳೂರು: ಬಾಣಸವಾಡಿ ಸಮೀಪದ ಹೊರ ವರ್ತುಲ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಆರೋಪದಡಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ನಾಗವಾರದ ಮಹಮ್ಮದ್ ರಿಯಾಜ್, ಬಂಧಿತ ಆರೋಪಿ. ಸೆ. 15ರಂದು ಹೊರವರ್ತುಲ ರಸ್ತೆಗೆ ಕರ್ಕಶ ಶಬ್ದ ಮಾಡುತ್ತಿದ್ದ ತನ್ನ ಯಮಹಾ ಬೈಕ್ ತೆಗೆದುಕೊಂಡು ಬಂದಿದ್ದ ರಿಯಾಜ್, ವ್ಹೀಲಿಂಗ್ ಮಾಡುತ್ತಿದ್ದ. ಈ ವೇಳೆ ಹಲವು ವಾಹನಗಳಿಗೆ ಅಡ್ಡಿಪಡಿಸಿದ್ದ. ಆ ಬಗ್ಗೆ ಸಾರ್ವಜನಿಕರೊಬ್ಬರು ನೀಡಿದ್ದ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಆತನನ್ನು ಬಂಧಿಸಲಾಯಿತು. ಬಂಧಿತನ ಬಳಿ ಡ್ರೈವಿಂಗ್ ಲೈಸೆನ್ಸ್ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಹೊರವರ್ತುಲ ರಸ್ತೆಯಲ್ಲಿ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಅವರು ಮಧ್ಯಾಹ್ನ ಊಟ ಹಾಗೂ ಸಂಜೆ ಚಹಾ ವಿರಾಮ ಪಡೆಯುತ್ತಿದ್ದರು. ಪೊಲೀಸರಿಲ್ಲದ ಸಮಯವನ್ನು ನೋಡಿ ವ್ಹೀಲಿಂಗ್ ಮಾಡುತ್ತಿದ್ದ ರಿಯಾಜ್, ಅಷ್ಟರಲ್ಲಿ ಸ್ಥಳಕ್ಕೆ ಬಂದ ಪೊಲೀಸರನ್ನ ನೋಡಿ ರಿಯಾಜ್ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಕಾರ್ಯ ಪ್ರವೃತ್ತರಾದ ಪೋಲೀಸರು ಆತನನ್ನು ಬಂಧಿಸಿದ್ದಾರೆ.
Advertisement