ಬೆಂಗಳೂರು: ಮನೆಗೆ ನುಗ್ಗಿ ಅತ್ತೆ-ಸೊಸೆ ಕತ್ತು ಸೀಳಿ ಬರ್ಬರ ಹತ್ಯೆ

ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ಹಂತಕರು ಅತ್ತೆ-ಸೊಸೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ...
ಅಪರಾಧ
ಅಪರಾಧ
Updated on: 
ಬೆಂಗಳೂರು: ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ಹಂತಕರು ಅತ್ತೆ-ಸೊಸೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. 
ಬೆಂಗಳೂರಿನ ವಸಂತನಗರ ಬಳಿಯ ಕಂಟೋನ್‌ಮೆಂಟ್ ಪ್ರದೇಶದಲ್ಲಿ ವಾಸವಾಗಿರುವ 50 ವರ್ಷದ ಸಂತೋಷಿಬಾಯಿ ಹಾಗೂ 30 ವರ್ಷದ ಲತಾ ಎಂಬುವರ ಮನೆಗೆ ಬೆಳಗ್ಗೆ 8 ಗಂಟೆ ಸುಮಾರಿಗೆ ನುಗ್ಗಿದ ಹಂತಕರು ಅತ್ತೆ-ಸೊಸೆಯನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. 
ಹತ್ಯೆ ನಡೆದ ಮನೆಗೆ ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ಭೇಟಿ ನೀಡಿದ್ದಾರೆ. ಇನ್ನು ಘಟನಾ ಸ್ಥಳದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com