ಬರಪೀಡಿತ ತಾಲೂಕುಗಳ ಸಂಖ್ಯೆ ನೂರಕ್ಕಿಂತಲೂ ಅಧಿಕ: ಕಾಗೋಡು ತಿಮ್ಮಪ್ಪ
ಬೆಂಗಳೂರು: ಬರಪೀಡಿತ ತಾಲೂಕುಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.
ಈ ಮೊದಲು 68 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು, ಆದರೆ ಇತ್ತೀಚಿನ ಅಂಕಿ ಅಂಶಗಳ ಪ್ರಕಾರ, 103 ತಾಲೂಕುಗಳಲ್ಲಿ ಬರ ತಾಂಡವವಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಮೊದಲು 68 ತಾಲೂಕುಗಳನ್ನು ಬರ ಪೀಡಿತವೆಂದು ಸಚಿವ ಸಂಪುಟಸಭೆಯಲ್ಲಿ ಘೋಷಿಸಲಾಗಿತ್ತು, ಆದರೆ ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಬರ ಪೀಡಿತ ತಾಲೂಕುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಶೀಘ್ರವೇ ಅವುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮುಂಗಾರು ಕೊರತೆಯಿಂದಾಗಿ ಮೈಸೂರು, ಮಂಡ್ಯ, ಮತ್ತು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ತಾಲೂಕುಗಳು ಬರಕ್ಕೆ ತುತ್ತಾಗಿವೆ ಎಂದು ಅವರು ತಿಳಿಸಿದ್ದಾರೆ.
ಮುಂದಿನ ಗುರುವಾರ ಬರ ಪರಿಶೀಲನಾ ಸಮಿತಿ ಸಭೆ ಸೇರಲಿದ್ದು ನಿಖರವಾದ ಮಾಹಿತಿ ಸಿಗಲಿದೆ ಎಂದು ಹೇಳಿದ್ದಾರೆ. ಇನ್ನೂ ಹೊಸ ಕೊಳವೆ ಬಾವಿಗಳನ್ನು ಕೊರೆಸಲು ಇರುವ ನಿಯಮಗಳನ್ನ ಸಡಿಲಗೊಳಿಸಲಾಗುವುದು ಎಂದು ವಿವರಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ