ಸಿಸಿಟಿವಿ ಕಣ್ಗಾವಲಿನಲ್ಲಿ ದ್ವಿತೀಯ ಪಿಯು ಉತ್ತರಪತ್ರಿಕೆಗಳ ಮೌಲ್ಯಮಾಪನ

ಪದವಿ ಪೂರ್ವ ಶಿಕ್ಷಣ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಸಲು ಶಿಕ್ಷಣ
ಪಿಯುಸಿ ಮೌಲ್ಯಮಾಪನ
ಪಿಯುಸಿ ಮೌಲ್ಯಮಾಪನ
Updated on: 
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. 
ದುಷ್ಕೃತ್ಯಗಳನ್ನು ತಡೆಯುವ ಸಲುವಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲು ನಿರ್ಧರಿಸಿದೆ. 
ಕಳೆದ ವರ್ಷ ಕೆಲ ಮೌಲ್ಯಮಾಪನ ಶಿಕ್ಷಕರು ಉತ್ತರ ಪತ್ರಿಕೆಗಳ ಫೋಟೋಗಳನ್ನು ತೆಗೆದುಕೊಂಡು ಅದನ್ನು ವಾಟ್ಸ್ಆಪ್ ನಲ್ಲಿ ಹರಿಬಿಟ್ಟಿದ್ದರು. ಇಂತಹ ದುಷ್ಕೃತ್ಯಗಳನ್ನು ತಡೆಯುವ ಸಲುವಾಗಿ ಶಿಕ್ಷಣ ಇಲಾಖೆ ಈ ತೀರ್ಮಾನಕ್ಕೆ ಬಂದಿದೆ. 
ರಾಜ್ಯದ 48 ಕ್ಯಾಂಪಸ್ ಗಳಲ್ಲಿ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ನಡೆಯಲಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಮಂಗಳೂರು, ದಾವಣಗೆರೆ, ಧಾರವಾಡ ಮತ್ತು ಬೆಳಗಾವಿ ಮೌಲ್ಯಮಾಪನ ನಡೆಯಲಿದ್ದು ಇಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗುವುದು. 
ಈ ಬಾರಿ ಸುಮಾರು 21 ಸಾವಿರ ಶಿಕ್ಷಕರು ಮೌಲ್ಯಮಾಪನ ಮಾಡಲಿದ್ದು 15 ದಿನಗಳ ಕಾಲ ಮೌಲ್ಯಮಾಪನ ಕೆಲಸ ನಡೆಯಲಿದೆ. ಇನ್ನು ಮೇ 10ಕ್ಕೆ ಫಲಿತಾಂಶ ಘೋಷಣೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com