ಬೆಂಗಳೂರು: 13 ವರ್ಷದ ಬಾಲಕಿಯೊಬ್ಬಳು ಬುಧವಾರ ಮಗುವಿಗೆ ಜನ್ಮ ನೀಡಿದ ನಂತರ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ 23 ವರ್ಷದ ಯುವಕನನ್ನು ಗುರುವಾರ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
13 ವರ್ಷದ ಬಾಲಕಿ ನಿನ್ನೆ ಸೂಲಿಬೆಲೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ಇದಕ್ಕೆ ಕಾರಣವಾದ ಅತ್ಯಾಚಾರಿ ಡೇವಿಡ್ ಅಲಿಯಾಸ್ ದೇವರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದ ಡೇವಿಡ್ ಹಲವು ಬಾರಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಈ ವಿಷಯ ಯಾರಿಗೂ ತಿಳಿಸದಂತೆ ಬಾಲಕಿಗೆ ಬೆದರಿಕೆ ಹಾಕಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಾಲಕಿ ನೀಡಿದ ಹೇಳಿಕೆಯನ್ನು ಆಧರಿಸಿ ಡೇವಿಡ್ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆರಿಗೆ ನೋವು ಕಾಣಿಸಿಕೊಂಡು ಬಾಲಕಿ ಆಸ್ಪತ್ರೆಗೆ ದಾಖಲಾದ ನಂತರವೇ ಈ ವಿಷಯ ಬೆಳಕಿಗೆ ಬಂದಿದೆ.